ದುಬೈನ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನದ ವಿರುದ್ಧ ವಿರುದ್ಧ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ಭಾರತದ ಆಟಗಾರರು ಭರ್ಜರಿ ಜಯ ಗಳಿಸಿದ್ದಾರೆ. ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಭಾರತ ಗೆದ್ದಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು. ಈ ಟೂರ್ನಿಯಲ್ಲಿ ಭಾರತದ ಅಜೇಯ ಓಟ ಮುಂದುವರೆದರೆ, ಪಾಕಿಸ್ತಾನದ ಸೋಲಿನ ಸರಣಿ ಮುಂದುವರೆದಿದೆ.
ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಅದು ಕೂಡ ಬದ್ಧವೈರಿ ಪಾಕಿಸ್ತಾನ್ ವಿರುದ್ಧ ಕೊಹ್ಲಿ ಅಬ್ಬರದ ಆಟ ಆಡಿದ್ದಾರೆ.ಇದರೊಂದಿಗೆ ಪಾಕಿಸ್ತಾನ ವಿರುದ್ಧ ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ವಿರಾಟ್ ಕೊಹ್ಲಿ ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.
ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್ ಆಯಿತು.ಇದಕ್ಕೆ ಉತ್ತರವಾಗಿ ಭಾರತ 42.3ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.
ಭಾರತದ ಪರ ಬ್ಯಾಟಿಂಗ್ ಮಾಡಿದ ಓಪನರ್ ರೋಹಿತ್ ಶರ್ಮಾ 20, ಶುಭ್ಮನ್ ಗಿಲ್ 46, ಶ್ರೇಯಸ್ ಅಯ್ಯರ್ 56, ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿದರು. ಶುಭ್ಮನ್ ಗಿಲ್ ಹಾಫ್ ಸೆಂಚುರಿ ಮಿಸ್ ಮಾಡಿದರೆ, ಶ್ರೇಯಸ್ ಅಯ್ಯರ್ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾದರು.ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಜೋಡಿ ಆಟವು ಭಾರತಕ್ಕೆ ಹೆಚ್ಚು ರನ್ ತಂದುಕೊಟ್ಟಿತು.