ದೇಶ : ಇಂದು ದೇಶಾದ್ಯಂತ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ಭಯೋತ್ಪಾದನೆ ಎಂಬ ಜಾಗತಿಕ ಪಿಡುಗು ವಿರುದ್ಧ ಹೋರಾಡುವ ಬಲಿಷ್ಠ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿ ಮೆರೆದ ದಿನವಾಗಿದೆ. ಪ್ರತಿವರ್ಷ ಮೇ 21 ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿಯ ದಿನದಂದು ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
1991ರ ಮೇ 21ರ ಈ ದಿನವೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ತಮಿಳುಪಾಡಂನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹುತಾತ್ಮರಾಗಿದ್ದರು. ಅವರ ನೆನಪಿನಲ್ಲಿ, ಹಾಗೂ ಭಯೋತ್ಪಾದನೆ ವಿರುದ್ಧದ ಬದ್ಧತೆಯ ಪ್ರತೀಕವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.
ಇತ್ತೀಚಿಗಷ್ಟೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದರು. ಈ ಉಗ್ರ ದಾಳಿಯಲ್ಲಿ 30 ಕ್ಕೂ ಹೆಚ್ಚು ಅಮಾಯಕ ಜೀವಗಳು ಬಲಿಯಾಗಿದ್ದವು. ಭಯೋತ್ಪಾದನೆ ಎನ್ನುವುದು ಇಡೀ ಪ್ರಪಂಚಕ್ಕೆ ಮಾರಕವಾಗಿದ್ದು, ಉಗ್ರರ ಅಟ್ಟಹಾಸಕ್ಕೆ ಅಮಾಯಕರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಭಯೋತ್ಪಾದನೆಯ ವಿರೋದಿ ಕೃತ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಶಾಂತಿ, ಮಾನವೀಯತೆ, ಏಕತೆ ಸಾಮರಸ್ಯವನ್ನು ಸಾರುವುದೇ ಈ ದಿನದ ಮುಖ್ಯ ಉದ್ದೇಶವಾಗಿದೆ.