India : ಪಾಕಿಸ್ತಾನದ ಹುಟ್ಟಡಗಿಸಲು ದೇಶದ ನಾರಿಯರ ರಣತಂತ್ರ

India :

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸಂಘರ್ಷ ನಡೆಯುತ್ತಿದೆ. ಒಂದು ಕಡೆ ಭಾರತ ಪಾಕ್‌ ದಾಳಿಗೆ ಪತ್ಯುತ್ತರ ನೀಡುತ್ತಿದೆ. ಮತ್ತೊಂದೆಡೆ ಗಡಿ ಭಾಗದ ಹಲವು ಪ್ರದೇಶಗಳನ್ನೇ ಗುರಿಯಾಗಿಸಿಕೊಂಡು ಪಾಕ್‌ ಶೆಲ್‌ ದಾಳಿ ನಡೆಸುತ್ತಿದೆ. ಇಂದು ಮುಂಜಾನೆ ನಡೆದ ದಾಳಿಯಲ್ಲಿ ಹಿರಿಯ ಅಧಿಕಾರಿ ಸೇರಿ ಐವರು ಮೃತಪಟ್ಟಿದ್ದರು. ಮಧ್ಯಾಹ್ನದ ವೇಳೆ ರಾಜಸ್ತಾನ ಮೇಲೂ ದಾಳಿ ನಡೆಸಲು ಪಾಕ್‌ ಯತ್ನಿಸಿತ್ತು. ಈ ಕುರಿತಾಗಿ ಇಂದು ನಮ್ಮ ವಿದೇಶಾಂಗ ಸಚಿವಾಲಯದ ಕಚೇರಿಯಲ್ಲಿ ಸೇನೆಯ ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿದ್ದಾರೆ.

ಪಾಪಿಪಾಕ್ ಭಾರತದ ಮೇಲೆ ಶೆಲ್‌ ಮತ್ತು ಮಿಸೈಲ್‌ ದಾಳಿಗೆ ಮುಂದಾಗಿದೆ. ಇದರ ಬೆನ್ನಲ್ಲೆ ವಿದೇಶಾಂಗ ಸಚಿವಾಲಯದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯ್ತು. ಈ ವೇಳೆ ವಾಯುಪಡೆಯ ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌ ಮಾತನಾಡಿ ಪಾಕ್ ಸೇನೆಯು ತನ್ನ ಸೈನ್ಯವನ್ನು ಗಡಿ ಪ್ರದೇಶಗಳತ್ತ ಸ್ಥಳಾಂತರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಭಾರತೀಯ ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಅಲ್ಲದೆ, ಪಾಕಿಸ್ತಾನವು ಭಾರತದ ಪ್ರಮುಖ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿರುವುದಾಗಿ ಸುಳ್ಳು ಹೇಳುತ್ತಿದೆ ಎಂದರು.

ಇದೇ ವೇಳೆ  ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮಾತನಾಡಿ, ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಿಗೆ ತನ್ನ ಸೈನಿಕರನ್ನು ನಿಯೋಜಿಸುತ್ತಿರುವುದನ್ನು ಗಮನಿಸುತ್ತಿದ್ದೇವೆ. ಪಾಕಿಸ್ತಾನದ ಸೇನಾ ಪಡೆಗಳು ಇಡೀ ಪಶ್ಚಿಮ ಭಾಗದಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಮುಂದುವರೆಸಿವೆ. ಭಾರತೀಯ ಸೇನೆ ಚೆಕ್​ ಪೋಸ್ಟ್​ಗಳನ್ನು ಗುರಿಯಾಗಿಸಿಕೊಂಡು ಯುಸಿಎಪಿ ಡ್ರೋನ್‌ಗಳು, ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಭಾರತದ ಎಲ್‌ಒಸಿಯಲ್ಲಿ ಭಾರೀ ಗುಂಡಿನ ದಾಳಿ ನಡೆದಿದೆ. ಎಲ್‌ಒಸಿ ಮತ್ತು ಐಬಿಯಲ್ಲಿ ಪಾಕ್​ ನ ಫೈಟರ್ ಜೆಟ್‌ಗಳು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿಗೆ ಪ್ರಯತ್ನಿಸಿವೆ. ಈ ವೇಳೆ ಪಾಕ್​ನ ಪ್ರಯತ್ನಗಳನ್ನು ಭಾರತ ವಿಫಲಗೊಳಿಸಿದೆ ಎನ್ನಲಾಗಿದೆ. ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರ್ ವಾಯು ನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ ಎನ್ನಲಾಗಿದೆ.

Author:

...
Sushmitha N

Copy Editor

prajashakthi tv

share
No Reviews