ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನೂಜಿಲ್ಯಾಂಡ್ ವಿರುದ್ಧ ಭಾರತ ತೃತೀಯ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ೨೫ ವರ್ಷಗಳ ಹಿಂದಿನ ಸೋಲಿಗೆ ಭಾರತ ಸೇಡಿ ತೀರಿಸಿಕೊಂಡಿದೆ. ಚಾಂಪಿಯನ್ಸ್ ಟ್ರೋಫಿ-2025 ಫೈನಲ್‌ನಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸುವ ಮೂಲಕ ಭಾರತ ತಂಡ 7ನೇ ಐಸಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್, ಭಾರತಕ್ಕೆ 252 ರನ್‌ಗಳ ಗುರಿಯನ್ನು ನೀಡಿತ್ತು. ಕ್ಯಾಪ್ಟನ್ ರೋಹಿತ್ ಶರ್ಮಾ 76 ರನ್‌ಗಳ ಇನ್ನಿಂಗ್ಸ್ ಆಟವಾಡಿದರು.ಇದರಿಂದ ಟೀಂ ಇಂಡಿಯಾದ ಗೆಲುವು ಸುಲಭವಾಯಿತು. ಈಗ 12 ವರ್ಷಗಳ ನಂತರ, ರೋಹಿತ್ ಶರ್ಮಾ ನಾಯಕತ್ವದಲ್ಲಿ ದುಬೈನಲ್ಲಿ ಅದ್ಭುತ ಗೆಲುವಿನೊಂದಿಗೆ ಟೀಮ್ ಇಂಡಿಯಾ ಮೂರನೇ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ 76 ರನ್ ಗಳಿಸಿ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಐಸಿಸಿ ಪುರುಷರ ಏಕದಿನ ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ವಿಶ್ವದ 4ನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.