ತುಮಕೂರು:
ಒಳ ಮೀಸಲಾತಿ ಜಾರಿಗೆ ಅಗ್ರಹಿಸಿ ಮಾದಿಗ ಸಮುದಾಯದ ಮುಖಂಡರು ದಾವಣಗೆರೆ ಜಿಲ್ಲೆ ಹರಿಹರದಿಂದ ಬೆಂಗಳೂರಿಗೆ ಕಾಂತ್ರಿಕಾರಿ ಪಾದಯಾತ್ರೆ ಕೈಗೊಂಡಿದ್ದಾರೆ. ಇಂದು ಅವರ ಪಾದಯಾತ್ರೆ ತುಮಕೂರು ನಗರಕ್ಕೆ ಆಗಮಿಸಿದ್ದು, ತುಮಕೂರಿನ ಟೌನ್ ನಲ್ಲಿ ಬಹಿರಂಗ ಸಭೆ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ಹೋರಾಟದ ಕಾಂತ್ರಿಗೀತೆ ಹಾಡಿ ಪಾದಯಾತ್ರೆ ರೂವಾರಿ ಸುರೇಶ್ ಏಕಾಏಕಿ ಕುಸಿದುಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗ್ತಿದೆ.
ಮಾದಿಗ ಸಮುದಾಯದ ಮುಖಂಡರು ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಹರಿಹರ ತಾಲೂಕಿನ ಪ್ರೋ.ಬಿ ಕೃಷ್ಣಪ್ಪ ಸಮಾಧಿಯಿಂದ ಪಾದಯಾತ್ರೆ ಕೈಗೊಂಡಿದ್ದು, ಇಂದು ತುಮಕೂರಿಗೆ ಪಾದಯಾತ್ರೆ ಆಗಮಿಸಿತ್ತು. ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಪಾದಯಾತ್ರೆಯ ಬಹಿರಂಗ ಸಭೆಯನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ನಡೆಸಲಾಗಿತ್ತು. ಸಭೆಯಲ್ಲಿ ಮಾದಿಗ ಸಮಾಜದ ಮುಖಂಡರು, ಜನಪ್ರತಿನಿಧಿಗಳು, ವಕೀಲರು ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಬೆಂಗಳೂರಿಗೆ ಪಾದಯಾತ್ರೆ ತಲುಪುವುದರೊಳಗೆ ಮೀಸಲಾತಿ ಜಾರಿ ಮಾಡಿ ಇಲ್ಲವಾದಲ್ಲಿ ಇದೇ 21 ರಂದು ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಸಭೆಯಲ್ಲಿ ಎಚ್ಚರಿಕೆ ನೀಡದರು
ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಕೆಲವು ರಾಜ್ಯಗಳಲ್ಲಿ ಒಳ ಮೀಸಲಾತಿ ಜಾರಿ ಮಾಡಿದೆ, ಆದರೆ ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿ ಮಾಡಲು ಮೀನಾಮೇಷ ಎಣಿಸುತ್ತಿದೆ ಹೀಗಾಗಿ ಸಮುದಾಯದ ಜನರು ಕೋಪಗೊಂಡಿದ್ದು ಹೋರಾಟಕ್ಕೆ ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಪರಿಶಿಷ್ಟ ಜಾತಿ, ಪಂಗಡಕ್ಕೆ ಆಗಿರೋ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಒಟ್ಟಿನಲ್ಲಿ ಒಳ ಮೀಸಲಾತಿ ಹೋರಾಟದ ಕಿಚ್ಚು ಜೋರಾಗಿದ್ದು, ಸಮುದಾಯದ ಪಾದಯಾತ್ರೆ ಬೆಂಗಳೂರಿಗೆ ತಲುಪುವಷ್ಟರಲ್ಲಿ ಮೀಸಲಾತಿ ಜಾರಿ ಆಗುತ್ತಾ. ಇಲ್ವಾ. ಒಳ ಮೀಸಲಾತಿ ಜಾರಿ ಆಗದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಯಾವ ಸ್ವರೂಪ ಪಡೆಯುತ್ತೋ ಎಂದು ಕಾದುನೋಡಬೇಕಿದೆ.