ಗುಬ್ಬಿ :
ಗುಬ್ಬಿ ಪಟ್ಟಣದ ಹೊರವಲಯದಲ್ಲಿರುವ ಬಾಲಾಜಿ ಕಲ್ಯಾಣ ಮಂಟಪದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯ್ತು, ಜೊತೆಗೆ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೂಡ ಆಯೋಜಿಸಲಾಗಿತ್ತು. ಈ ವೇಳೆ ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಮ್ಮ , ಉಪಾಧ್ಯಕ್ಷೆ ಮಮತ, ಮುಖ್ಯಾಧಿಕಾರಿ ಮಂಜುಳಾದೇವಿ, ಬಿಇಒ ನಟರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವೀಣಾ ಸೇರಿದಂತೆ ಹಲವರು ಭಾಗಿಯಾಗಿದ್ದರು.
ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಮಾತನಾಡಿ ಮಹಿಳೆಯರು ಬಲಹೀನರಾಗದೇ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆದರೆ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗುತ್ತೇ ಎಂದರು. ಮಹಿಳೆಯು ಕುಟುಂಬದ ಕಣ್ಣಾಗಿರಬೇಕು, ಭಾರತೀಯ ಪರಂಪರೆಯಲ್ಲಿ ಹೆಣ್ಣಿಗೆ ವಿಶೇಷ ಸ್ಥಾನ ನೀಡಿದ್ದು. ಪ್ರತಿಯೊಬ್ಬರೂ ಹೆಣ್ಣನ್ನು ಗೌರವಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು. ಅಲ್ಲದೇ ಮಹಿಳೆಯರು ಅಡಿಗೆ ಮನೆಗೆ ಮಾತ್ರ ಸೀಮಿತವಾಗದೆ, ಕೃಷಿ ಹೈನುಗಾರಿಕೆ ಮಾಡುವ ಮೂಲಕ ಪ್ರಗತಿಯತ್ತ ಸಾಗಬೇಕು ಎಂದು ತಿಳಿಸಿದರು.
ಇನ್ನು ತಹಶೀಲ್ದಾರ್ ಬಿ ಆರತಿ ಮಾತನಾಡಿ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರಗಳ್ಲಲಿ ಸಾದನೆ ಮಾಡ್ತಿದ್ದು, ಕುಟುಂಬ ಪ್ರೋತ್ಸಾಹಿಸಿದರೆ ವಿಶ್ವದಲ್ಲಿ ಇನ್ನು ಅತ್ಯುನ್ನತ ಹುದ್ದೆಗಳನ್ನ ಅಲಂಕರಿಸ್ತಾರೆ, ಈಗಾಗಲೇ ಮಹಿಳೆಯು ಶಿಕ್ಷಣ, ಕ್ರೀಡೆ, ಉದ್ಯಮ ರಾಜಕೀಯ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿದ್ದಾರೆ, ಇನ್ನು ಮಹಿಳೆಯರು ಸಣ್ಣ ಸಣ್ಣ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಬೇಕು ಎಂದರು.