ಗುಬ್ಬಿ :
ಗುಬ್ಬಿ ಪಟ್ಟಣದ ಬಾಬು ಜಗಜೀವನ್ ರಾಮ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ ಪ್ಯಾನೆಲ್ ಅಡ್ವೋಕೇಟ್ ಶಾಂತಗೌಡ, ಸಿಡಿಪಿಒ ಮಹೇಶ್, ಅಂಗನವಾಡಿ ಕಾರ್ಯಕರ್ತೆ ಸಂಘದ ಮಾಜಿ ಅಧ್ಯಕ್ಷೆ ಲಲಿತಾ ಪ್ರಭಾ, ಅಂಗನವಾಡಿ ಕಾರ್ಯಕರ್ತೆ ಸಂಘದ ಅಧ್ಯಕ್ಷೆ ಅನುಸೂಯಮ್ಮ, ಎಸಿಪಿಡಿಒ ಕೃಷ್ಣಮೂರ್ತಿ, ಕಾರ್ಯದರ್ಶಿ ಸರೋಜಮ್ಮ ಸೇರಿ ಹಲವರು ಭಾಗಿಯಾಗಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೌಕರರ ಸಂಘ, ಸ್ತ್ರೀಶಕ್ತಿ ಒಕ್ಕೂಟ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು, ಇನ್ನು ಗುಬ್ಬಿ ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಮಾತನಾಡಿ ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗದಲ್ಲಿಯೂ ಮುನ್ನಲೆಗೆ ಬರ್ತಿದ್ದು, ಜೊತೆಗೆ ಎಲ್ಲಾ ಪರೀಕ್ಷೆಯ ಫಲಿತಾಂಶದಲ್ಲಿಯೂ ಹೆಣ್ಣು ಮಕ್ಕಳು ಮುಂದಿರೋದು ಸಂತಸದ ಸಂಗತಿಯಾಗಿದೆ ಎಂದರು.
ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಮ್ಮ ಮಾತನಾಡಿ ಸಮಾನತೆ ಮತ್ತು ಸಬಲೀಕರಣ ವಿಷಯದಡಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತಿದ್ದು. ಜಾಗತಿಕವಾಗಿ ಮಹಿಳೆಯರು ಉತ್ತಮ ಪ್ರಗತಿ ಸಾದಿಸಲು ಸಹಕಾರಿಯಾಗಿದೆ.ಅಲ್ದೇ ಗಂಡು ಹೆಣ್ಣು ಎಂಬ ಬೇಧಭಾವ ಮಾಡದೇ ಎಲ್ಲರನ್ನೂ ಸಮನಾಗಿ ಕಾಣಬೇಕಿದೆ. ಇನ್ನು ಪ್ರಸ್ತುತ ದಿನಗಳಲ್ಲಿ ಮಕ್ಕಳನ್ನು ಮೊಬೈಲ್ ಬಳಕೆಯಿಂದ ದೂರ ಸರಿಯುವಂತೆ ಮಾಡಬೇಕಿದೆ ಎಂದರು.