ಶಿರಾ:
ಶಿರಾ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗೀತಾಂಜಲಿ ಅವರು ಉದ್ಘಾಟಿಸಿದರು. ಈ ವೇಳೆ ನ್ಯಾಯಾಂಗ ಸಿಬ್ಬಂದಿ ವರ್ಗದವರು ಹಾಗೂ ಮಹಿಳಾ ವಕೀಲರು ಸೇರಿದಂತೆ ಮಹಿಳಾ ಸರ್ಕಾರಿ ಅಭಿಯೋಜಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗೀತಾಂಜಲಿ ಅವರು ಮಾತನಾಡಿ ಮಹಿಳೆ ಮತ್ತು ಪುರುಷ ಇಬ್ಬರು ಒಂದೇ ಬಂಡಿಯ ಎರಡು ಚಕ್ರಗಳಿದ್ದಂತೆ. ಇಬ್ಬರೂ ಜೊತೆಗೂಡಿ ಸಮನಾಗಿ ಮುನ್ನಡೆದರೆ ಮಾತ್ರ ಗುರಿ ತಲುಪಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರು ಮ್ಯೂಸಿಕಲ್ ಚೇರ್, ಪಾಸ್ ದ ಬಾಲ್, ಲೆಮನ್ ಸ್ಪೂನ್ ಮತ್ತಿತರ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ನಂತರ ನ್ಯಾಯಾಲಯದ ಸ್ವಚ್ಛತೆಯನ್ನು ಕಾಪಾಡುತ್ತಿದ್ದ ಶ್ರೀಮತಿ ಲಕ್ಕಮ್ಮ ಮತ್ತು ಶ್ರೀಮತಿ ಗಿರಿಜಮ್ಮ ಅವರನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗೀತಾಂಜಲಿ ಅವರು ಇಬ್ಬರ ಕರ್ತವ್ಯವನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿದರು.