IPL 2025 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ 1 ವಾರಗಳ ಕಾಲ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಚುಟುಕು ಕ್ರಿಕೆಟ್ ಹಬ್ಬ ಇಂದಿನಿಂದ ಪುನರಾರಂಭವಾಗ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿವೆ.
ಈ ಬಾರಿಯ ಐಪಿಎಲ್ನಲ್ಲಿ ಆರ್ ಸಿಬಿ ತಂಡವು ಈವರೆಗೆ 11 ಪಂದ್ಯಗಳನ್ನು ಆಡಿದ್ದು, 8 ಜಯ ಸಾಧಿಸಿ 16 ಅಂಕಗಳನ್ನು ಕಲೆಹಾಕಿದೆ. ಇದೀಗ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿರುವ ಆರ್ಸಿಬಿ ಪಡೆ ಈ ಮ್ಯಾಚ್ನಲ್ಲಿ ಗೆದ್ದರೆ ಪ್ಲೇಆಫ್ ಹಂತಕ್ಕೇರಲಿದೆ.
ಅಲ್ದೇ ಇಂದಿನ ಪಂದ್ಯ ಕೊಹ್ಲಿ ಅಭಿಮಾನಿಗಳಿಗೆ ತುಂಬಾನೇ ವಿಶೇಷ. ಯಾಕಂದರೆ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಮುಖ್ಯ ಆಕರ್ಷಣೆಯಾಗಿರಲಿದ್ದಾರೆ. ಇದರಿಂದ ಹೆಚ್ಚಿನ ಜನ ಸೇರುವ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಬಿಗಿ ಭದ್ರತೆ ಪರಿಶೀಲನೆ ನಡೆಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ.