IPL 2025:
ಇಂಡಿಯನ್ ಪ್ರೀಮಿಯರ್ ಲೀಗ್ ನ ದೆಹಲಿಯ ಅರುಣ್ ಜೆಟ್ಲಿ ಮೈದಾನದಲ್ಲಿ ನಡೆದ 48ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 14 ರನ್ ಗಳಿಂದ ಸೋಲನ್ನು ಅನುಭವಿಸಿದೆ. ಸತತ ಗೆಲುವಿನೊಂದಿಗೆ ಮುಂಚೂಣಿಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ಸೋಲುಗಳಿಂದ ಕಂಗೆಟ್ಟಿದೆ.
ಡೆಲ್ಲಿಯ ಹೋಮ್ ಗ್ರೌಂಡ್ ನಲ್ಲಿ ನಿನ್ನೆ ಕೆಕೆಆರ್ ತಂಡದ ಆರ್ಭಟ ಜೋರಾಗಿತ್ತು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದಲ್ಲಿ ಕೆಕೆಆರ್ ತಂಡ ಅರುಣ್ ಜೆಟ್ಲಿ ಸ್ಟೇಡಿಯಂನಲ್ಲಿ ಗೆಲುವಿನ ನಗೆ ಬೀರಿತ್ತು, ಅಲ್ಲದೇ ತವರಿನಲ್ಲಿ ಡೆಲ್ಲಿ ತಂಡ ಬಾರೀ ಮುಖಭಂಗ ಅನುಭವಿಸ್ತು. ಇದರಿಂದ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನಕ್ಕೇರಬೇಕೆಂಬ ಡೆಲ್ಲಿ ಕನಸಿಗೆ ತಣ್ಣೀರೆರಚಿದೆ. ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ 20 ಓವರ್ಗಳಲ್ಲಿ 204 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 190 ರನ್ಗಳಿಸಲಷ್ಟೇ ಶಕ್ತವಾಯಿತು.
ಆರ್ ಸಿಬಿ ಹಾಗೂ ಕೆಕೆಆರ್ ವಿರುದ್ದದ ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಇದೀಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇನ್ನು ನೂತನ ಪಾಯಿಂಟ್ಸ್ ಟೇಬಲ್ ನಲ್ಲಿ ಆರ್ ಸಿಬಿ ಮೊದಲ ಸ್ಥಾನದಲ್ಲಿದ್ದರೆ. ಸಿಎಸ್ ಕೆ ಕೊನೆಯ ಸ್ಥಾನದಲ್ಲಿದೆ. ಈಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ ನ 48 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲೂ ಸಹ ಮಹತ್ವದ ಬದಲಾವಣೆಯಾಗಿದೆ.