IPL 2025 : ಗುಜರಾತ್ ಟೈಟನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 2025ರ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದೆ. ಅರುಣ್ ಜೆಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19 ಓವರ್ ಗಳಲ್ಲಿ ಒಂದು ವಿಕೆಟ್ ಕಳೆದುಕೊಳ್ಳದೇ ಈ ಗುರಿ ತಲುಪುವಲ್ಲಿ ಯಶಸ್ವಿಯಾಯ್ತು.
ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆದಿವೆ. ಈ ಮೂಲಕ ಐಪಿಎಲ್ 2025ರ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದ ಮೂರು ತಂಡಗಳು ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಆಗಿವೆ.
ಇನ್ನು ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದ್ದು. ಈ ಎರಡು ತಂಡ ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದ್ದು, ಪ್ಲೇಆಫ್‌ಗೆ ಪ್ರವೇಶಿಸಲು ಈ ಪಂದ್ಯ ಮುಖ್ಯವಾಗಿದೆ.