ಜೇಕೆಬ್ ಬೆಥೆಲ್ಕ್ರಿಕೆಟ್
Jacob Bethell BBL 2025 :ಈ ಬಾರಿಯ ಮೆಗಾ ಹರಾಜಿನಲ್ಲಿ ಜೇಕೆಬ್ ಬೆಥೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 2.6 ಕೋಟಿ ರೂ. ಗೆ ಖರೀದಿಸಿದೆ. 21 ವರ್ಷದ ಜೇಕಬ್ ಬೆಥೆಲ್ ಇಂಗ್ಲೆಂಡ್ ತಂಡದ ಭರವಸೆಯ ಆಲ್ ರೌಂಡರ್ ಆಟಗಾರನಾಗಿದ್ದಾನೆ. ಆರ್‌ಸಿಬಿ ಖರೀದಿ ಬೆನ್ನಲ್ಲೇ ಅಬ್ಬರ ಶುರು ಮಾಡಿರುವ ಜೇಕಬ್ ಈ ಬಾರಿಯ ಐಪಿಎಲ್‌ನಲ್ಲೂ ಸಿಡಿಲಬ್ಬರ ಪ್ರದರ್ಶಿಸುವ ನಿರೀಕ್ಷೆಯಿದೆ.
ಇದೇ ಮೊದಲ ಬಾರಿಗೆ ಐಪಿಎಲ್ ಟೂರ್ನಿ ಆಡುತ್ತಿರುವ ಬೆಥೆಲ್, ಹೊಬಾರ್ಟ್ ಹರಿಕೇನ್ಸ್ ವಿರುದ್ಧ ಚೊಚ್ಚಲ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಜೇಕಬ್ ಬೆಥೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಬೆಲ್ಗೆರಿವ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಜೇಕೆಬ್ ಬೆಥೆಲ್ ಅವರ ಈ ಅರ್ಧಶತಕದ ನೆರವಿನಿಂದ ಮೆಲ್ಬೋರ್ನ್ ರೆನೆಗೇಡ್ಸ್ ತಂಡವು 20 ಓವರ್‌ಗಳಲ್ಲಿ 154 ರನ್ ಕಲೆಹಾಕಿತ್ತು. 155 ರನ್‌ಗಳ ಗುರಿ ಬೆನ್ನತ್ತಿದ್ದ ಹೋಬಾರ್ಟ್ ಹರಿಕೇನ್ಸ್ ತಂಡವು 19.4 ಓವರ್‌ಗಳಲ್ಲಿ 155 ರನ್ ಬಾರಿಸಿ 6 ವಿಕೆಟ್‌ಗಳ ಜಯ ಸಾದಿಸಿತು. ಇಂಗ್ಲೆಂಡ್ ತಂಡದ ಭರವಸೆಯ ಯುವ ಆಲ್‌ರೌಂಡರ್ ಆಗಿ ಗುರುತಿಸಿಕೊಂಡಿರುವ ಜೇಕಬ್ ಬೆಥೆಲ್ ಭರ್ಜರಿ ಪಾರ್ಮ್‌ನ್ಲಲಿದ್ದು, ಇದೇ ರೀತಿಯಾಗಿ ಐಪಿಎಲ್‌ನಲ್ಲೂ ಅಬ್ಬರಿಸುವ ನಿರೀಕ್ಷೆಯಿದೆ.