ಕೋಲಾರ :
ಆನ್ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ. ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿಯಾಗಿದ್ದಾನೆ.
ಇನ್ನು ಆರೋಪಿ ಸೈಯದ್ ಸಾದಿಕ್ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್ಲೈನ್ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್ಗಳ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದ. ಆರೋಪಿ ಬಳಿ ಇದ್ದ ಎರಡು ಮೊಬೈಲ್ಗಳು, ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ 32,046 ರೂ. ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.