PIYUSH CHAWLA RETIREMENT : ಟೀಂ ಇಂಡಿಯಾದ ಮಾಜಿ ಸ್ಪಿನ್ನರ್, ಇಬ್ಬರು ವರ್ಲ್ಡ್ ಕಪ್ ವಿಜೇತ ತಂಡದ ಪ್ರಮುಖ ಆಟಗಾರ ಪಿಯೂಷ್ ಚಾವ್ಲಾ [Piyush chawla] ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ [Retirement] ಘೋಷಿಸಿದ್ದಾರೆ.
2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಗೆದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ಪಿಯೂಷ್ ಚಾವ್ಲಾ, ಭಾರತಕ್ಕೆ ಮಹತ್ವದ ಕೊಡುಗೆ ನೀಡಿರುವ ಸ್ಪಿನ್ನರ್ ಎನಿಸಿಕೊಂಡಿದ್ದರು. LEG SPINNER ಆಗಿ ಪಿಯೂಷ್ ತಮ್ಮ ವಿಶಿಷ್ಟ ಶೈಲಿಯಿಂದ ಗಮನ ಸೆಳೆದಿದ್ದರು. 38 ವರ್ಷದ ಪಿಯೂಷ್ ಚಾವ್ಲಾ ಅವರು ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ಗೆ GOOD BYE ಹೇಳಿದ್ದು, ಈ ನಿರ್ಧಾರವನ್ನುINSTAGRAM POST ಮೂಲಕ ಬಹಿರಂಗಪಡಿಸಿದ್ದಾರೆ. ಅಭಿಮಾನಿಗಳಿಗೆ ಈ ಸುದ್ದಿ ಅಚ್ಚರಿ ಮೂಡಿಸಿದೆ.
IPL ಇತಿಹಾಸದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪಿಯೂಷ್ ಚಾವ್ಲಾ, 192 ಪಂದ್ಯಗಳಲ್ಲಿ 192 ವಿಕೆಟ್ ಪಡೆದಿರುವ ಸಾಧನೆ ಸಾಧಿಸಿದ್ದಾರೆ. ಐಪಿಎಲ್ನಲ್ಲಿ ಅವರು ಪಂಜಾಬ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಪರವಾಗಿ ಆಟವಾಡಿದ್ದಾರೆ.