ಶಿವಮೊಗ್ಗ:
ಶಿವಮೊಗ್ಗ ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಫೆ. 17 ಸೋಮವಾರ ಸಂಜೆ 7 ರಿಂದ 8 ವರ್ಷದೊಳಗಿನ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
ಹುಲಿಯ ಮೃತದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಇದುವರೆಗೂ ಯಾವತ್ತು ಹುಲಿಗಳು ಪ್ರತ್ಯಕ್ಷವಾಗಿಲ್ಲ, ಹೀಗಾಗಿ ಬೇರೆ ಕಡೆ ಹುಲಿ ಕೊಂದು ಇಲ್ಲಿ ತಂದು ಹಾಕಲಾಗಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಈ ವಿಷಯದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸೂಚಿಸಿದ್ದಾರೆ.
ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆಅವರು ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿದ್ದಾರೆ. ಮೃತ ಹುಲಿ ದೇಹದಲ್ಲಿ ಗುಂಡು ಹೊಡೆದ ಗಾಯವಿರುವ ಬಗ್ಗೆ ಮಾಹಿತಿ ದೊರೆತಿದ್ದು, ಈ ಬಗ್ಗೆ ತನಿಖೆ ನಡೆಸಿ 10 ದಿನಗಳೊಳಗಾಗಿ ವರದಿ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.