CHAMARAJANAGARA: ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ | ಇಂದಿನಿಂದ 3 ದಿನ ಬೆಟ್ಟಕ್ಕೆ ವಾಹನ ನಿಷೇಧ

ಚಾಮರಾಜನಗರ: 

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ 3 ದಿನಗಳ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಮಾರ್ಚ್‌ 29ರಿಂದ ಮಾರ್ಚ್‌ 31ರ ವರೆಗೆ ದ್ವಿಚಕ್ರ ವಾಹನ ಮತ್ತು ಆಟೋ, ಗೂಡ್ಸ್‌ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಬಗ್ಗೆ  ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.‌

ಯುಗಾದಿ ಹಬ್ಬದ ಸಂದರ್ಭ ಮಲೆಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಯುಗಾದಿ ಸಂದರ್ಭದಲ್ಲಿ ಮೂರು ದಿನಗಳ ಕಾಲ ಜಾತ್ರೆ ಕೂಡ ಬೆಟ್ಟದಲ್ಲಿ ನಡೆಯುತ್ತಿದ್ದು, ಭಕ್ತರ ಪ್ರವಾಹವೇ ಹರಿದುಬರುವ ನಿರೀಕ್ಷೆ ಇದೆ. ಬೆಟ್ಟಕ್ಕೆ ಜಾತ್ರೆಗೆ ಬರುವವರಿಗೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇಂದು ಅಮಾವಾಸ್ಯೆ ಪೂಜೆ, ಯುಗಾದಿ ರಥೋತ್ಸವ ನಡೆಯಲಿದ್ದು ಸಾವಿರಾರು ಭಕ್ತರು ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ.

 

 

 

Author:

...
Sub Editor

ManyaSoft Admin

share
No Reviews