ನವದೆಹಲಿ :
ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಾಧೀಶ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ನ್ಯಾಯಮೂರ್ತಿಗೆ ಪ್ರತಿಜ್ಞಾವಿಧಿ ಭೋಧಿಸಿದರು. ಈ ಮೂಲಕ ಮೊಟ್ಟಮೊದಲ ಬಾರಿಗೆ ಬೌದ್ಧ ಧರ್ಮದ ಒಬ್ಬರು ಉನ್ನತ ಹುದ್ದೆಯನ್ನು ಅಲಂಕರಿಸಿದ ಖ್ಯಾತಿಗೆ ಭೂಷಣ್ ಅವರು ಭಾಜನರಾಗಿದ್ದಾರೆ.
ನೂತನ ಸುಪ್ರೀಂಕೋರ್ಟ್ ಜಡ್ಜ್ ಆಗಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಕೇಂದ್ರ ಸಚಿವ ಸಂಪುಟದ ಸಚಿವರು ಭಾಗಿಯಾಗಿದ್ದರು. ಈ ವೇಳೆ ಮಾಜಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನೂತನ ನ್ಯಾಯಮೂರ್ತಿ ಭೂಷಣ್‌ಗೆ ಶುಭಕೋರಿದರು.
ಇನ್ನು ಇದಕ್ಕೂ ಮುನ್ನ ಸುಪ್ರೀಂಕೋರ್ಟ್ ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಅವರು ಕಾರ್ಯನಿರ್ವಹಿಸ್ತಾ ಇದ್ದು, ಇವರ ಅವಧಿ ಮುಗಿದಿದ್ದು, ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿಯನ್ನು ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಸುಪ್ರೀಂಕೋರ್ಟ್ ಜಡ್ಜ್ ಆದ ಭೂಷಣ್ ಅವರು ಕೇವಲ 6 ತಿಂಗಳು ಮಾತ್ರ ಈ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದು, 2025ರ ನವೆಂಬರ್ ತಿಂಗಳಲ್ಲಿ ಇವರು ನಿವೃತ್ತಿ ಹೊಂದಲಿದ್ದಾರೆ. ಮುಂಬೈ ಹೈಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದ ಗವಾಯಿ ಅವರು 1985ರಲ್ಲಿ ಸೀನಿಯರ್ ಜೂರಿಸ್ಟ್ ಬಾರ್ಗೆ ಸೇರಿಕೊಂಡರು. ನಂತರ ಮುಂಬೈ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ 2003ರಲ್ಲಿ ಆಯ್ಕೆ ಆಗಿದ್ದರು. ಬಳಿಕ 2005ರಲ್ಲಿ ಖಾಯಂ ನ್ಯಾಯಾಧೀಶರಾದರು. ಗವಾಯಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ 2019 ರಲ್ಲಿ ಬಡ್ತಿ ನೀಡಲಾಗಿತ್ತು.