ಮಧುಗಿರಿ:
ಮಧುಗಿರಿ ಪಟ್ಟಣದ ಕಾರ್ಮಿಕರ ಅಧಿಕಾರಿ ಕಛೇರಿ ಆವರಣದಲ್ಲಿ ಕಾರ್ಮಿಕ ಅಧಿಕಾರಿ ಉಪವಿಭಾಗ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ಸ್ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿ ಇ ಓ ಪ್ರಭು, ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ತಹಸೀಲ್ದಾರ್ ಶಿರೀನ್ ತಾಜ್ ರವರು , ಡಿ.ವೈ.ಎಸ್.ಪಿ ಮಂಜುನಾಥ್, ಕಾರ್ಮಿಕ ನಿರೀಕ್ಷಕ ಅಬ್ದುಲ್ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.
ಇನ್ನು ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಕೆ ಎನ್ ರಾಜಣ್ಣ ಕಾರ್ಮಿಕರಿಗೆ ನಿಮ್ಮ ಕಷ್ಟಗಳು ನಿಮ್ಮ ತಲೆಮಾರಿಗೆ ಕೊನೆಯಾಗಬೇಕು, ಹಾಗೂ ನಿಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಎಂದು ಸಲಹೆ ನೀಡಿದರು. ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದರೆ ಆ ಮಕ್ಕಳೇ ನಿಮ್ಮ ಮುಂದಿನ ಜೀವನದ ಆಸ್ತಿಯಾಗಿ ರೂಪುಗೊಳ್ಳುತ್ತಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸುತ್ತಿದ್ದು ಸರ್ಕಾರಿ ಸವಲತ್ತುಗಳೊಂದಿಗೆ ಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದು ತಿಳಿಸಿದರು.