ಮಂಗಳೂರು : ಮಂಗಳೂರು ನಗರದ ಉರ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್ ಸಿಟಿ ಆಶ್ರಯದೊಂದಿಗೆ ನಿರ್ಮಿತವಾದ 36 ಕೋಟಿ ವೆಚ್ಚದ ನೂತನ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದರು.
ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಕರಾವಳಿ ಭಾಗದ ಯುವಜನರು ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಈ ಕ್ರೀಡಾಂಗಣ ನೆರವಾಗಲಿದೆ ಎಂದರು.
ಈ ವೇಳೆ ಸ್ಪೀಕರ್ ಯುಟಿ ಖಾದರ್, ಸಚಿವ ಕೃಷ್ಣ ಭೈರೇಗೌಡ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ವೇದವ್ಯಾಸ್ ಕಾಮತ್, ಸಂಸದ ಬ್ರಿಜೇಶ್ ಚೌಟ ಮತ್ತು ಜಿಲ್ಲಾಧಿಕಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.