ಕಲಬುರಗಿ :
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದ ಕಾರಣ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಕಲಬುರಗಿ ತಾಲೂಕಿನ ಮಾಲಗತ್ತಿ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಗೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ದವಸ ಧಾನ್ಯಗಳು ಸೇರಿದಂತೆ ದಾಖಲೆಗಳು ಸುಟ್ಟು ಭಸ್ಮವಾಗಿದೆ.
ಮಾಲಗತ್ತಿ ಗ್ರಾಮದ ಲಕ್ಷ್ಮಿಬಾಯಿ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಇನ್ನು ಮನೆ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಯಿಂದ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಲ್ದೇ ಬೆಂಕಿ ಅನಾಹುತದಿಂದಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಲಕ್ಷ್ಮಿಬಾಯಿ ಕುಟುಂಬ ಕಣ್ಣೀರಾಕ್ತಾ ಇದ್ದು, ಕೂಡಲೇ ಸರ್ಕಾರ ಪರಿಹಾರ ಘೋಷಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಗುಲ್ಬರ್ಗ ವಿವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗುಲ್ಬರ್ಗ ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.