kalburgi - 189 ಜನರಿಗೆ ಸ್ಥಳದಲ್ಲಿಯೇ ಉದ್ಯೋಗ ನೇಮಕಾತಿ ಮಾಡಿದ ಕಲುಬುರುಗಿ ಜಿಲ್ಲಾಡಳಿತ

ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು
ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು
ಕಲಬುರ್ಗಿ

ಕಲಬುರಗಿ

ಕಲಬುರಗಿತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 189 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕಲಬುರಗಿ ಜಿಲ್ಲಾ ಪಂಚಾಯತ್ ಹಾಗೂ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳವನ್ನು ಜಿಲ್ಲಾ ಪಂಚಾಯ್ ಸಿಇಓ ಭಂವರ್ ಸಿಂಗ್ ಮೀನಾ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ್ ಇಓ ಎಂ.ಡಿ ಸೈಯದ್ ಪಟೇಲ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಕಲಬುರಗಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ನಂದಕಿಶೋರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಲಬುರಗಿ, ಬೆಂಗಳೂರು ಹೈದರಾಬಾದ್‌, ಪುಣೆ ಮೂಲದ ಸುಮಾರು 30 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು, 1,349 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಉದ್ಯೋಗ ಮೇಳದಲ್ಲಿಯೇ 189 ಜನರು ನೇಮಕವಾಗಿದ್ದು, ಉಳಿದಂತೆ 300 ಅಭ್ಯರ್ಥಿಗಳನ್ನು ಕಂಪನಿಗಳು ಶಾರ್ಟ್ ಲಿಸ್ಟ್ ಮಾಡಿದ್ದು, ಮುಂದೆ ಅವರನ್ನು ಸಂಪರ್ಕಿಸಿ ಅಂತಿಮ ಹಂತದ ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲಿ ಮಾತನಾಡಿದ ಜಿಲ್ಲಾ ಪಂಚಾಯ್ ಸಿಇಓ ಭಂವರ್ ಸಿಂಗ್ ಮೀನಾ ಜಿಲ್ಲೆಯಲ್ಲಿ ನಿರುದ್ಯೋಗ ಯುವಕ ಮತ್ತು ಯುವತಿಯರನ್ನು ಉದ್ಯೋಗ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 30 ಕಂಪನಿಗಳು ಭಾಗವಹಿಸಿ, ಉದ್ಯೋಗಾಕಾಂಕ್ಷಿಗಳಿಗೆ ಸಂದರ್ಶನ ನಡೆಸಿದ್ದಾರೆ. ಉದ್ಯೋಗ ಪಡೆದುಕೊಂಡವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಕರೆ ನೀಡಿದ ಅವರು, ಸಾಂಕೇತಿಕವಾಗಿ 5 ಜನ ಯುವಕ-ಯುವತಿಯರಿಗೆ ಉದ್ಯೋಗದ ಆದೇಶ ಪತ್ರ ನೀಡಿದರು.

 


 

Author:

...
Editor

ManyaSoft Admin

Ads in Post
share
No Reviews