KALBURGI - ವೈದ್ಯರ ಎಡವಟ್ಟು.. ಬಾಣಂತಿಯ ಹೊಟ್ಟೆಯಲ್ಲೇ ಬಟ್ಟೆ ಉಂಡೆ ಮತ್ತು ಹತ್ತಿ ಬಿಟ್ಟು ಹೊಲಿಗೆ ಹಾಕಿ ಎಡವಟ್ಟು

ಭಾಗ್ಯಶ್ರೀ
ಭಾಗ್ಯಶ್ರೀ
ಕಲಬುರ್ಗಿ

KALBURGI -

ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು ಬಟಾಬಯಲಾಗಿದೆ. ಮಹಿಳೆಯೊಬ್ಬರಿಗೆ ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲಿ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಇದೇ ತಿಂಗಳ  ಫೆಬ್ರವರಿ 5ರಂದು ಭಾಗ್ಯಶ್ರೀ ಎಂಬ ಮಹಿಳೆಗೆ ಸಿಸೇರಿಯನ್‌ ಆಗಿತ್ತು. ಈ ವೇಳೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಹೊಟೆಯಲ್ಲೇ ಬಟ್ಟೆ ಹುಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ತಕ್ಷಣಕ್ಕೆ ಇದು ಮಹಿಳೆಯ ಅರಿವಿಗೆ ಬಂದಿಲ್ಲ. ಮಹಿಳೆಗೆ ಒಂದು ವಾರದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೊಟ್ಟೆನೋವು ಎಂದು  ಸ್ಕ್ಯಾನಿಂಗ್‌ಗೆ ಬಂದಾಗ ವೈದ್ಯರ ಯಡವಟ್ಟು ಬಯಲಾಗಿದೆ. 

ಬಳಿಕ ಅಫಜಲಪುರ ಕರಜಗಿ ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ಮಹಿಳೆಯನ್ನು ಕರೆದುಕೊಂಡು ಹೋಗಿ  ವೈದ್ಯರಿಂದ ಮರು ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.  ಶಸ್ತ್ರ ಚಿಕಿತ್ಸೆ ಬಳಿಕ ಹೊಟ್ಟೆಯಲ್ಲಿದ್ದ ಬಟ್ಟೆ ಉಂಡೆ ಹಾಗು ಹತ್ತಿ ತೆಗೆದಿದ್ದಾರೆ.  ಆದರೆ ಕುಟುಂಬಸ್ಥರ ಆರೋಪವನ್ನು ಜಿಮ್ಸ್ ವೈದ್ಯರು ತಳ್ಳಿಹಾಕಿದ್ದಾರೆ.  ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಸರ್ಜನ್‌ ಸದ್ಯ ಮಹಿಳೆಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

Author:

...
Editor

ManyaSoft Admin

Ads in Post
share
No Reviews