ಮಧುಗಿರಿ:
ಕಳೆದ 15 ದಿನಗಳ ಹಿಂದೆ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಕಾಳೇನಹಳ್ಳಿ ಗ್ರಾಮದಲ್ಲಿ ಕೊಲೆಯಾದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಶವ ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೊಬಳಿಯ ಕಾಳೇನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅದೇ ಗ್ರಾಮದ ರಾಮಕೃಷ್ಣ ಎಂಬುವವರ ಮೃತ ದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಬೆಳಗ್ಗೆ ಶವ ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ರಾಮಕೃಷ್ಣನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಡಿ ಹೋಗಿರುವ ಶಂಕೆ ಒಂದ್ಕಡೆ ಆದ್ರೆ, ಮತ್ತೊಂದ್ಕಡೆ ಕುಡಿದ ಮತ್ತಿನಲ್ಲಿ ಬಿದ್ದಿದ್ದರಿಂದ ರಾಮಕೃಷ್ಣ ತಲೆ, ಕಣ್ಣು, ಕಿವಿ ಭಾಗಕ್ಕೆ ಪೆಟ್ಟಾಗಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಅನುಮಾನ ಪಡಲಾಗಿದೆ.
ಕಾಳೇನಹಳ್ಳಿಯಲ್ಲಿ ರಾಮಕೃಷ್ಣನ ಮೃತದೇಹ ಪತ್ತೆಯಾಗ್ತಿದ್ದಂತೆ ಗ್ರಾಮಸ್ಥರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನ ದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ರಾಮಕೃಷ್ಣ ಅವರನ್ನು ಕೊಲೆ ಮಾಡಲಾಗಿಲ್ಲ, ಬದಲಾಗಿ ಕುಡಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರ ಹೇಳಿಕೆಯಲ್ಲಿ ದಾಖಲಿಸಿದ್ದಾರೆ. ಆದ್ರೆ ಇದಕ್ಕಿಂದ್ದಂತೆ ಮಧುಗಿರಿಯಲ್ಲಿ ಶವ ಪತ್ತೆ, ಕೊಲೆಗಳಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗ್ತಿದೆ. ಜೊತೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ಯಾ ಎಂಬ ಅನುಮಾನ ಮೂಡಿದೆ.