Cinema : ಕನ್ನಡ ಚಿತ್ರರಂಗದ ನಟಿ ರುಕ್ಮಿಣಿ ವಸಂತ್ ಅವರ ಪಾಲಿಗೆ ದೊಡ್ಡ ಬ್ರೇಕ್ ಸಿಕ್ಕಿರುವ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಖುಷಿಪಟ್ಟಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ಮೆಚ್ಚುಗೆ ಪಡೆದ ರುಕ್ಮಿಣಿಗೆ ಈಗ ಟಾಲಿವುಡ್‌ನ ದೊಡ್ಡ ಪ್ರಾಜೆಕ್ಟ್‌ಗಳಲ್ಲಿ ನಟಿಸುವ ಅವಕಾಶ ಒಲಿದು ಬಂದಿದೆ.
ಪ್ಯಾನ್ ಇಂಡಿಯಾ ಹೀರೋ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಸ್ಪಿರಿಟ್' ನಲ್ಲಿ ನಾಯಕಿಯಾಗಿ ರುಕ್ಮಿಣಿ ವಸಂತ್ ಆಯ್ಕೆಯಾಗಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸುತ್ತಿದ್ದಾರೆ. ಮತ್ತೊಂದು ಖುಷಿಯ ಸುದ್ದಿ ಎಂದರೆ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ಜೂನಿಯರ್ ಎನ್ಟಿಆರ್ ಅಭಿನಯದ ಚಿತ್ರದಲ್ಲೂ ರುಕ್ಮಿಣಿ ನಾಯಕಿಯಾಗಿ ನಟಿಸುವ ಅವಕಾಶ ಸಿಕ್ಕಿದೆ ಎನ್ನಲಾಗಿದೆ.
ಕಳೆದ ವರ್ಷ ರುಕ್ಮಿಣಿ ಅಭಿನಯದ ತೆಲುಗಿನ ‘ಅಪ್ಪುಡೋ ಇಪ್ಪುಡೋ ಎಪ್ಪುಡೋ’ ಸಿನಿಮಾ ರಿಲೀಸ್ ಆಗಿತ್ತು. ಹೀಗಿರುವಾಗಲೇ ಮತ್ತೇ ತೆಲುಗಿನ ಸ್ಟಾರ್ ನಟರ ಜೊತೆ ನಟಿಸೋ ಅವಕಾಶ ಪಡೆದಿದ್ದಾರೆ. ರುಕ್ಮಿಣಿ ಅವರು ಕನ್ನಡದ ಶಿವರಾಜ್ಕುಮಾರ್, ರಕ್ಷಿತ್ ಶೆಟ್ಟಿ, ಗಣೇಶ್ ಮೊದಲಾದವರ ಜೊತೆ ತೆರೆ ಹಂಚಿಕೊಂಡಿದ್ದಾರೆ.