ಬೆಂಗಳೂರು : ಕೋರಮಂಗಲ ಹೋಟೆಲ್‌ನಲ್ಲಿ ಬಳಸಿರೋ ಪದಕ್ಕೆ ಕನ್ನಡಿಗರು ಕೆಂಡಾಮಂಡಲ

ಬೆಂಗಳೂರು : ಬೆಂಗಳೂರಿನ ಕೋರಮಂಗಲದ ಹೋಟೆಲ್‌ಗಳಲ್ಲಿ ಕನ್ನಡಿಗರ ವಿರುದ್ಧ ಅವಹೇಳನಕಾರಿ ಬರಹ ಪ್ರಸಾರವಾಗಿದ್ದು, ಇದರಿಂದ ಕನ್ನಡಿಗರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ. ಬೆಂಗಳೂರಿನ ನೆಕ್ಸಸ್ ಮಾಲ್ ಸಮೀಪದ HOTEL GS SUITEನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧದ ವಿಡಿಯೋ ಹರಿದಾಡುತ್ತಿದೆ.

ಹೌದು, HOTEL GS SUITE ಎಂಬ ಹೋಟೆಲ್ನ ಡಿಜಿಟಲ್ ಡಿಸ್ಪ್ಲೇ ಬೋರ್ಡ್‌ನಲ್ಲಿ, "KANNAGIDA M***" ಎಂಬ ಅವಾಚ್ಯ ಪದಗಳನ್ನು ಬಳಸಿ ಕನ್ನಡಿಗರನ್ನು ನಿಂದಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಪ್ರಾಥಮಿಕ ತನಿಖೆಯಲ್ಲಿ ಈ ಬರಹವನ್ನು ಉದ್ದೇಶಪೂರ್ವಕವಾಗಿ ಪ್ರದರ್ಶಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಈಗಾಗಲೇ ವಿಚಾರಣೆ ಆರಂಭಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ಧಾರೆ..

ಇನ್ನು ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾವಿರಾರು ಮಂದಿ ಈ ಕೃತ್ಯವನ್ನು ಖಂಡಿಸಿದ್ದಾರೆ. ಕೆಲವರು ಹೋಟೆಲ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇತ್ತೀಚೆಗಷ್ಟೆ ಗಾಯಕ ಸೋನು ನಿಗಮ್ ಅವರ ವಿವಾದಾತ್ಮಕ ಹೇಳಿಕೆಯು ಕನ್ನಡಿಗರಲ್ಲಿ ಅಸಮಾಧಾನ ಉಂಟುಮಾಡಿತ್ತು. ಇದೀಗ ಮತ್ತೆ ಕನ್ನಡಿಗರನ್ನು ಅವಮಾನಿಸುವಂಥ  ಘಟನೆ ಮರುಕಳಿಸಿದೆ.

Author:

...
Keerthana J

Copy Editor

prajashakthi tv

share
No Reviews