ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ನೀಡಿದ್ದಾರೆ. ಕುಕ್ಕೆಗೆ ಸಾಮಾನ್ಯವಾಗಿ ಮದುವೆ ಆಗದವರು, ಮಕ್ಕಳಾಗದವರು ಹಾಗೂ ಚರ್ಮ ಸಮಸ್ಯೆಗಳಿಂದ ಬಳಲುತ್ತಿರು ಜನರು ಭೇಟಿ ನೀಡುತ್ತಾರೆ. ಅನೇಕರು ಸರ್ಪ ಸಂಸ್ಕಾರ ಪೂಜೆ ಮಾಡಿಸಿ ದೋಷ ನಿವಾರಣೆ ಮಾಡಿಕೊಳುತ್ತಾರೆ.
ಇದೀಗ ಬಾಲಿವುಡ್ ನಟಿ ಕತ್ರಿನಾ ಕೈಫ್ ಕೂಡ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ. ಸಂತಾನಕ್ಕಾಗಿ ನಟಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗ್ತಿದೆ. ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ಸುಬ್ರಹ್ಮಣ್ಯನಿಗೆ ಸೇವೆ ನೆರವೇರಿಸಲಿದ್ದಾರೆ.
ಸಂತಾನಕ್ಕಾಗಿ ನಟಿ ಕತ್ರಿನಾ ಕೈಫ್ ಸುಬ್ರಹ್ಮಣ್ಯನ ಸ್ವಾಮಿಯ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೂ ಕತ್ರಿನಾ ಕೈಫ್ ಭೇಟಿ ನೀಡಿದ್ದರು. ಮಹಾ ಕುಂಭಮೇಳದಲ್ಲಿ ಭಾಗಿಯಾದ ಕತ್ರಿನಾ ಕೈಫ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು.