ಕೇರಳ : ಕಾಡು ಹಂದಿ ದಾಳಿಯಿಂದ ರೈತ ಸಾವು..!

ಕೇರಳ:

ಕಾಡುಹಂದಿಯ ದಾಳಿಗೆ ರೈತರೊಬ್ಬರು ಮೃತಪಟ್ಟಿರುವಂತಹ ಘಟನೆ ಕೇರಳದ ಕಣ್ಣೂರು ಬಳಿಯ ಪನೂರ್‌ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

70 ವರ್ಷದ ಶ್ರೀಧರನ್‌ ಎಂಬ ರೈತರೊಬ್ಬರು ಕಾಡುಹಂದಿ ದಾಳಿಗೆ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಈತ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಶ್ರೀಧರನ್‌ ಅವರ ಕಿರುಚಾಟವನ್ನು ಕೇಳಿ ಸ್ಥಳೀಯರು ಘಟನಾ ಸ್ಥಳಕ್ಕೆ ಕೂಡಲೇ ಆಗಮಿಸಿದ್ದಾರೆ. ಆದರೆ ಆತನನ್ನು ರಕ್ಷಿಸಲು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ , ಇನ್ನು ಕಾಡುಹಂದಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೈತ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು ಕತಿರೂರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಘಟನೆ ಕುರಿತು ಪ್ರಾಥಮಿಕ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಕೇರಳ ಅರಣ್ಯ ಸಚಿವ ಎ.ಕೆ. ಶಶಿಂಧ್ರನ್‌ ಕೂಡಲೇ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Author:

...
Editor

ManyaSoft Admin

Ads in Post
share
No Reviews