ಕೋಲಾರ:
ಬೆಳೆ ಹಾಳು ಮಾಡಿದ್ದಾರೆ ಎಂಬ ವಿಚಾರವಾಗಿ ದಾಯಾದಿಗಳ ನಡುವೆ ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಪಡವನಹಳ್ಳಿಯಲ್ಲಿ ನಡೆದಿದೆ.
35 ವರ್ಷದ ಮುನಿರಾಜು ಎಂಬಾತ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಬೋರ್ ವೆಲ್ ಲಾರಿ ಹಾಗೂ ಮೆಣಸಿನ ಗಿಡ ಹಾಳು ಮಾಡಿದ್ದಾರೆ ಎಂಬ ಕಾರಣಕ್ಕೆ ಬುಧವಾರ ರಾತ್ರಿ ಮಧ್ಯರಾತ್ರಿ ಸುಮಾರಿಗೆ ದಾಯಾದಿಗಳ ಮಧ್ಯೆ ಗಲಾಟೆ ನಡೆದಿದ್ದು, ಗಲಾಟೆಯು ತಾರಕಕ್ಕೇರಿ ಮುನಿರಾಜು ಎಂಬಾತನ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಭೇಟಿ ನೀಡಿ , ಪರಿಶೀಲನೆ ನಡೆಸಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.