ಕೋಲಾರ :
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ ಸರ್ಕಲ್ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ವಿ. ಗುಟ್ಟಹಳ್ಳಿ ಗ್ರಾಮದ ನಿವಾಸಿ ಸುಬ್ರಮಣಿ ಎಂಉಬರು ಮೃತ ದುರ್ದೈವಿಯಾಗಿದ್ದಾರೆ.
ಬೈಕ್ ಗೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗ್ತಿದೆ. ಇನ್ನು ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.