ಕೋಲಾರ :
ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ನಡೆದಿದೆ.
ಆಂದ್ರಪ್ರದೇಶದ ಮದನಪಲ್ಲಿ ಮೂಲದ ಗಂಗಾಧರ್ ಎಂಬಾತ ಮೃತ ದುರ್ದೈವಿಯಾಗಿದ್ದಾನೆ. ಎರಡು ಖಾಸಗಿ ಬಸ್ ಗಳು ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದ್ದು, ಇನ್ನು ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿದ್ದು, ಸದ್ಯ ಗಾಯಾಳುಗಳನ್ನು ಕೋಲಾರ ಹಾಗೂ ಮದನಪಲ್ಲಿ ಜಿಲ್ಲಾ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗ್ತಿದೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.