KOLAR : ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಕಳ್ಳತನ ಮಾಡುತ್ತಿದ್ದ ಮೂರು ಮಂದಿ ಸರಗಳ್ಳರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಶಿಧರ್ (39) ಹರ್ಷಿತ್ (25) ಹಾಗೂ ಸೂರ್ಯಪ್ರಕಾಶ್ (24) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅರೋಪಿಗಳು ಕೋಲಾರ ನಗರ ಮತ್ತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಸರಗಳ್ಳತನ ಪ್ರಕರಣಗಳಲ್ಲಿ ತೊಡಗಿದ್ದರು.
ಆರೋಪಿಗಳಿಂದ 95 ಗ್ರಾಂ ತೂಕದ ಚಿನ್ನದ ಗಟ್ಟಿಗಳು ಮತ್ತು ಕೃತ್ಯಕ್ಕೆ ಬಳಸಿದ್ದ 2 ಹೊಂಡಾ ಶೈನ್ ದ್ವಿಚಕ್ರ ವಾಹನಗಳು ಪೊಲೀಸರು ಸೀಜ್ ಮಾಡಿದ್ದಾರೆ. ಕೋಲಾರ ನಗರ ಪೊಲೀಸರು ಈ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.