ಕೋಲಾರ:
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪುರಾಣ ಪ್ರಸಿದ್ದ ಆವನಿ ಕ್ಷೇತ್ರದಲ್ಲಿ ಶ್ರೀ ಆವನಿ ರಾಮಲಿಂಗೇಶ್ವರ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ನಡುವೆ ಶುಕ್ರವಾರ ಅದ್ದೂರಿಯಾಗಿ ಜರುಗಿತು.
ಮುಳಬಾಗಿಲು ತಾಲೂಕಿನ ಆವನಿ ಗ್ರಾಮದಲ್ಲಿರುವ ಪೌರಣಿಕ ಇತಿಹಾಸವುಳ್ಳ ಹಾಗೂ ರಾಮಾಯಣದ ಐತಿಹ್ಯವನ್ನು ಹೊಂದಿರುವ ಶ್ರೀ ಆವನಿ ರಾಮಲಿಂಗೇಶ್ವರ ರಥೋತ್ಸವ ಹಾಗೂ ದನಗಳ ಜಾತ್ರೆ ಇಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ರಾಜ್ಯದಲ್ಲಿಯೇ ಅತೀದೊಡ್ಡ ದನಗಳ ಜಾತ್ರೆ ಇದಾಗಿದ್ದು, ಈ ಜಾತ್ರೆ ನೋಡಲು ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಯಾವುದೇ ತೊಂದರೆ ಆಗದಂತೆ ಕುಡಿಯುವ ನೀರಿನ ಸೌಲಭ್ಯ ಹಾಗೂ ತಾತ್ಕಾಲಿಕ ಶೌಚಾಲಯ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಜಾತ್ರೆಯು 8 ದಿನಗಳ ಕಾಲ ನಡೆಯುತ್ತದೆ.
ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.