KOPPALA - ಅಂಗನವಾಡಿಯಲ್ಲಿದ್ದಾಗಲೇ ಕುಸಿದು ಬಿದ್ದು 5 ವರ್ಷದ ಮಗು ಸಾವು

 ಮೃತ ಬಾಲಕಿ.
ಮೃತ ಬಾಲಕಿ.
ಕೊಪ್ಪಳ

ಹೃದಯವೈಫಲ್ಯ ಕಾರಣಗಳಿಂದ ಚಿಕ್ಕ ವಯಸ್ಸಿನ ಮಕ್ಕಳು ಕುಸಿದು ಬಿದ್ದು  ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇವೆ.  ಇದೇ ರೀತಿ ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ  ನಡೆದಿದೆ. ಅಂಗನವಾಡಿಯಲ್ಲಿ ಆಟ ಆಡುತ್ತಿರುವಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು  ಸಾವನ್ನಪ್ಪಿದ್ದಾಳೆ. ಈ ಘಟನೆ ಕೊಪ್ಪಳ  ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅಲಿಯಾ ಮಹ್ಮದ್‌ ರಿಯಾಜ್‌ ಮೃತ ಬಾಲಕಿ. ಸೋಮವಾರ ಮುಂಜಾನೆ ಪ್ರತಿದಿನದಂತೆ ಬಾಲಕಿ ಅಂಗನವಾಡಿಗೆ ಹೋಗಿದ್ದಳು. ಮುಂಜಾನೆ ಉಪಹಾರ ಸೇವಿಸಿದ್ದ ಬಾಲಕಿ ಚಟುವಟಿಕೆಯಿಂದಲೇ ಇದ್ದಳು. ಅಂಗನವಾಡಿಯಲ್ಲಿ ಎಲ್ಲಾ ಮಕ್ಕಳಂತೆ ಆಟವಾಡುತ್ತಿದ್ದಳು. ಆದರೆ ಮಧ್ಯಾಹ್ನ ಆಟವಾಡುತ್ತಿದ್ದ ವೇಳೆ ಕುಸುದು ಬಿದ್ದಿದ್ದಾಳೆ. ಬಾಲಕಿ ಬಿದ್ದಿದ್ದನ್ನು ನೋಡಿ ಅಂಗನವಾಡಿ ಸಹಾಯಕಿ ಓಡಿ ಬಂದಿದ್ದಾಳೆ. ಕೂಡಲೇ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಬಾಲಕಿಯನ್ನು ಸಮೀಪದ ದೋಟಿಹಾಳ‌ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗದ ಮಧ್ಯೆಯೇ ಬಾಲಕಿ ಮೃತಪಟ್ಟಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಸಾವಿಗೆ ಇದೇ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

Author:

share
No Reviews