ಕೊಪ್ಪಳ :
ಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಿಳೆ ಕೈಗೆ ಗುಂಡು ತಾಗಿರುವ ಘಟನೆ ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ.
34 ವರ್ಷದ ದ್ರಾಕ್ಷಾಯಿನಿ ರೇಣುಕಾ ಎಂಬ ಮಹಿಳೆ ಕೈಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ, ಪೊಲೀಸ್ ಸಿಬ್ಬಂದಿಗಳಿಗೆ ಗುಂಡು ಹಾರಿಸುವ ತರಬೇತಿ ನೀಡುವ ವೇಳೆ ಆಕಸ್ಮಿಕವಾಗಿ ಕುರಿಗಾಹಿ ಮಹಿಳೆಗೆ ಗುಂಡು ತಾಗಿ ಈ ಅವಘಡ ಸಂಭವಿಸಿದೆ. ತಕ್ಷಣವೇ ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ಘಟನೆಯ ಮಾಹಿತಿ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.