
ಎಲೆರಾಂಪುರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿದ್ದಕ್ಕೆ ಸಿಹಿಹಂಚಿ ಸಂಭ್ರಮಾಚರಣೆತುಮಕೂರು
ಕೊರಟಗೆರೆ:
ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರನ್ನು ಹೂವಿನ ಹಾರ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಪಕ್ಷಬೇದ ಇಲ್ಲದೇ ಇಂದು ವಿಎಸ್ಎಸ್ ಎನ್ ಚುನಾವಣೆ ನಡೆದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ರೈತರಿಗೆ ಇನ್ನಷ್ಟು ಸಹಾಯ ಆಗಲಿದೆ ಎಂದರು.
ಡಿಸಿಸಿ ಬ್ಯಾಂಕು ನಿರ್ದೇಶಕ ಹನುಮಾನ್ ಮಾತನಾಡಿ ನಷ್ಟದಲ್ಲಿದ್ದ ಎಲೆರಾಂಪುರ ವಿಎಸ್ ಎಸ್ಎನ್ ಬ್ಯಾಂಕು ಕಾರ್ಯದರ್ಶಿ ಮತ್ತು ಅಧ್ಯಕ್ಷರ ಪರಿಶ್ರಮದಿಂದ ಇಂದು ಕೊರಟಗೆರೆ ನಂ.1ಸ್ಥಾನದಲ್ಲಿದೆ ಎಂದರು.
ಇನ್ನು ಇದೇ ವೇಳೆ ನೂತನ ಅಧ್ಯಕ್ಷ ಮಧುಕುಮಾರ್ ಮಾತನಾಡಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣನವರ ಆಶೀರ್ವಾದೊಂದಿಗೆ ಅವಿರೋಧವಾಗಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ. ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.