ಕೊರಟಗೆರೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿ ಆತ್ಮಹತ್ಯೆ | ಕುಟುಂಬಸ್ಥರ ಆಕ್ರಂದನ

ಮೃತ ನಂಜೇಗೌಡ
ಮೃತ ನಂಜೇಗೌಡ
ತುಮಕೂರು

ಕೊರಟಗೆರೆ:

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ನಂಜೇಗೌಡ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಮಗಳ ವಿದ್ಯಾಬ್ಯಾಸಕ್ಕೆಂದು ಊರನ್ನು ಬಿಟ್ಟು ತುಮಕೂರಿನಲ್ಲಿ ನಂಜೇಗೌಡ ಹಾಗೂ ಅವರ ಕುಟುಂವ ವಾಸವಾಗಿತ್ತು. ಆದರೆ ನಿನ್ನೆ ಊರಿಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ನಂಜೇಗೌಡ ನೇಣಿಗೆ ಕೊರಳೊಡ್ಡಿದ್ದಾನೆ.

ನಂಜೇಗೌಡ ಮನೆಯಲ್ಲಿ ಕೌಟುಂಬಿಕ ವಿಚಾರಕ್ಕೆ ತುಮಕೂರಿನ ಮನೆಯಲ್ಲಿ ಇದ್ದಾಗಲೇ ಗಲಾಟೆ ನಡೆಯುತ್ತಿದ್ದು, ಮಾತಿಗೆ ಮಾತು ಬೆಳೆದಿದೆ, ಬಳಿಕ ಕೊರಟಗೆರೆಯ ತಮ್ಮ ಊರಿಗೆ ಬಂದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ನಂಜೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಯಜಮಾನನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನಂಜೇಗೌಡ ಮೃತದೇಹವನ್ನು ಕೊರಟಗೆರೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಯಿತು. ಇನ್ನು ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಅನಿಲ್ ಹಾಗೂ ಸಬ್ ಇನ್ಸ್ ಪೆಕ್ಟರ್ ಚೇತನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Author:

...
Editor

ManyaSoft Admin

Ads in Post
share
No Reviews