ಕೊರಟಗೆರೆ:
ಕೊರಟಗೆರೆ ತಾಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸುಂದರಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಹಾರ ಹಾಕಿ ಬೆಂಬಲಿಗರು ಅಭಿನಂದನೆ ಸಲ್ಲಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಡಿಸಿಸಿ ಬ್ಯಾಂಕು ನಿರ್ದೇಶಕ ಹನುಮಾನ್ ಸೇರಿದಂತೆ ಎಲ್ಲಾ ನಿರ್ದೇಶಕರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ವಿನಯ್ ಕುಮಾರ್, ಕಸಬಾ ಬ್ಯಾಂಕಿನಿಂದ ಈಗಾಗಲೇ ರೈತರಿಗೆ 4 ಕೋಟಿಗೂ ಅಧಿಕ ಸಾಲ ನೀಡಿದ್ದೇವೆ. ನೂತನ ಕಟ್ಟಡದ ಜೊತೆ ಇನ್ನೂ ರೈತರ ಬೇಡಿಕೆ ಪೂರೈಕೆಗೆ ಶ್ರಮಿಸುತ್ತೇನೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ.ಎನ್ ರಾಜಣ್ಣನವರ ಆಶೀರ್ವಾದೊಂದಿಗೆ ಎಲ್ಲಾ ನಿರ್ದೇಶಕರು ಸೇರಿದಂತೆ ಮುಖಂಡರುಗಳ ಸಹಾಯದಿಂದ ಅವಿರೋಧವಾಗಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಎಂದರು.
ನಿರ್ದೇಶಕ ಕೆ.ವಿ.ಪುರುಷೋತ್ತಮ್ ಮಾತನಾಡಿ ಪಕ್ಷ ಭೇದವಿಲ್ಲದೆ ಇಂದು ವಿಎಸ್ಎಸ್ಎನ್ ಚುನಾವಣೆ ನಡೆದಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಮತ್ತು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ರೈತರಿಗೆ ಇನ್ನಷ್ಟು ಸಹಾಯ ಆಗಲಿದೆ. ನಾವು ಎಲ್ಲಾ ಸದಸ್ಯರು ಒಟ್ಟಾಗಿ ಸೇರಿ ರೈತರಿಗೆ ಸಹಕಾರ ಕ್ಷೇತ್ರದಲ್ಲಿ ಸಿಗುವ ಸವಲತ್ತುಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.