ಕೊರಟಗೆರೆ:
ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ತಡವಾಗಿ ಬೆಳಕಿಗೆ ಬಂದಿದೆ . ಕೊರಟಗೆರೆ ತಾಲೂಕಿನ ಕೋಡಿಹಳ್ಳಿ ಗ್ರಾಮದ ರೈತ ಬಸವರಾಜು ಜಮೀನಿನ ಸಮೀಪ ಕಳೆದ ಎರಡು ದಿನದ ಹಿಂದೆ ದುರ್ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಇನ್ನು ಬೇಟೆಯಾಡುವ ಸಂದರ್ಭದಲ್ಲಿ ವಿದ್ಯುತ್ ಕಂಬ ಹತ್ತಲು ಹೋಗಿ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ತುಮಕೂರು ಅರಣ್ಯ ಇಲಾಖೆಯ ಡಿಎಫ್ ಓ ನವೀನ್, ಆರ್ ಏಫ್ ಓ ನಮೀತಾ ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿವರ್ಗ ಭೇಟಿನೀಡಿ ಚಿರತೆಯನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.