KPSC ನಡೆಸಿದ ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣ ಗೌಡ ನೇತೃತ್ವದಲ್ಲಿ ಫೆಬ್ರವರಿ 18 ರಂದು ಬೆಳ್ಳಿಗ್ಗೆ 11 ಕ್ಕೆ ಬೃಹತ್ ಪ್ರತಿಭಟನೆಯನ್ನು ಸ್ವಾತಂತ್ರ್ಯ ಉದ್ಯಾನವನ, ಬೆಂಗಳೂರಿನಲ್ಲಿ ನಡೆಸಲಾಗುತ್ತದೆ.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಈ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಗಳನ್ನು ಮೊದಲು 2024 ಆಗಸ್ಟ್‌ನಲ್ಲಿ ನಡೆಸಿತ್ತು. ಆದರೆ ಕನ್ನಡ ಪತ್ರಿಕೆಯಲ್ಲಿನ ಭಾಷಾಂತರದ ಗೊಂದಲದ ಕಾರಣ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಲಾಗಿತ್ತು. ಆದ್ದರಿಂದ ದಿನಾಂಕ 29-12-2024 ರಂದು ಮರು ಪರೀಕ್ಷೆ ನಡೆಸಲಾಗಿತ್ತು.
ಈ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆದರೆ ಡಿಸೆಂಬರ್‌ನಲ್ಲಿ ನಡೆದ ಮರು ಪರೀಕ್ಷೆಯಲ್ಲಿಯೂ ಕನ್ನಡ ತಪ್ಪುಗಳಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ. ಈ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆದರೆ ಡಿಸೆಂಬರ್‌ನಲ್ಲಿ ನಡೆದ ಮರು ಪರೀಕ್ಷೆಯಲ್ಲಿಯೂ ಕನ್ನಡ ತಪ್ಪುಗಳಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ. ಕೆಪಿಎಸ್‌ಸಿಯಿಂದ ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.
ಈ ಆರೋಪಗಳ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸ್ಪಷ್ಟನೆಯೊಂದನ್ನು ನೀಡಿದೆ. ಈ ಆರೋಪವು ಸರಿಯಲ್ಲ ಎಂದು ಮತ್ತು 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದಿಲ್ಲವೆಂದು ಆಯೋಗವು ಸ್ಪಷ್ಟಪಡಿಸುತ್ತದೆ ಎಂದು ಹೇಳಿದೆ.