ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ನಿತ್ಯವೂ ಎಲ್ಲಾ ಪಕ್ಷಗಳ ಸಾಕಷ್ಟು ಪ್ರತಿನಿಧಿಗಳು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಪುಣ್ಯ ನೀರಿನಲ್ಲಿ ಮಿಂದೆದ್ದಿದ್ದಾರೆ.
ಮಹಾಕುಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಸಮೇತ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಕೇಂದ್ರ ಸಚಿವರೊಂದಿಗೆ ಅವರ ಪತ್ನಿ ಜ್ಯೋತಿ ಜೋಶಿ, ಮಕ್ಕಳಾದ ಅರ್ಪಿತಾ ಜೋಶಿ, ಅನನ್ಯಾ ಜೋಶಿ, ಅನುಷಾ ಜೋಶಿ, ಹಾಗೂ ಸಹೋದರ ಗೋವಿಂದ ಜೋಶಿ, ಕಮಲಾ ಜೋಶಿ ತ್ರಿವೇಣಿ ಸಂಗಮದ ಪವಿತ್ರ ಗಂಗೆಯಲ್ಲಿ ಮುಳುಗೇಳುತ್ತಾ ತೀರ್ಥಸ್ನಾನ ಮಾಡಿದರು.
ಸಚಿವರು ದೇವರಿಗೆ ನಮಸ್ಕರಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕುಟುಂಬ ಸಮೇತರಾಗಿ ವಿಶಿಷ್ಠ ಭಂಗಿಯ ಭಗವಾನ್ ಹನುಮ ದೇವಾಲಯ ಹಾಗೂ ಅಕ್ಷಯವತ್ಗೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ತ್ರಿವೇಣೀ ಸಂಗಮದಲ್ಲಿ ಇಂದು ಕುಟುಂಬ ಸಮೇತ ಪಾಲ್ಗೊಂಡು ಪವಿತ್ರ ಸ್ನಾನ ಮಾಡುವ ಸುವರ್ಣಾವಕಾಶ ಲಭ್ಯವಾಗಿದ್ದು ನಮ್ಮ ಪುಣ್ಯ ಎಂದು ಪ್ರಹ್ಲಾದ್ ಜೋಶಿ ಅವರು ಖುಷಿಪಟ್ಟಿದ್ದಾರೆ.