ಕುಣಿಗಲ್‌ : ಬೈಕ್‌ ಕ್ಯಾಂಟರ್‌ ವಾಹನ ಡಿಕ್ಕಿ | ಯುವತಿ ಸ್ಥಳದಲ್ಲೇ ಸಾವು

ಕುಣಿಗಲ್‌ :

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್‌ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ ಸವಾರ ಗಾಯ ಗೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಅಂಚೇಪಾಳ್ಯ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರ ಸರ್ವೀಸ್‌ ರಸ್ತೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬ್ಯಾಡರಹಳ್ಳಿ ನಿವಾಸಿ 19 ವರ್ಷದ ಧನುಶ್ರೀ ಮೃತ ದುರ್ದೈವಿಯಾಗಿದ್ದಾರೆ.

ಮೃತ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದು, ಮಂಗಳೂರಿನಿಂದ ಊರ ಹಬ್ಬಕ್ಕೆಂದು ಬ್ಯಾಡರಹಳ್ಳಿಗೆ ಬಂದಿದ್ದು, ಹಬ್ಬ ಮುಗಿಸಿಕೊಂಡು ವಾಪಸ್‌ ಮಂಗಳೂರಿಗೆ ತೆರಳಲು ಸಹೋದರನ ಜೊತೆ ಕುಣಿಗಲ್‌ ರೈಲ್ವೆ ನಿಲ್ದಾಣಕ್ಕೆ ಬೈಕ್‌ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವಿದ್ಯಾರ್ಥಿನಿ ಧನುಶ್ರೀ ಮೃತಪಟ್ಟರೆ ಬೈಕ್‌ ಸವಾರ ಮೃತಳ ಸಹೋದರ ರೇಣುಕೇಶ್‌ ಗಂಭೀರವಾಗಿ ಗಾಯಗೊಂಡಿದ್ದು, ಕುಣಿಗಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಣಿಗಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಕುಣಿಗಲ್‌ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Author:

share
No Reviews