ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಐದು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೇರೂರು ಬಳಿ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಪ್ರಾಣಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಇನ್ನು ಗಾಯಾಳುಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.