ಗುಬ್ಬಿ : ಎಂ.ಎಚ್.ಪಟ್ಟಣದಲ್ಲಿ ಅದ್ದೂರಿ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ಗುಬ್ಬಿ :

ಗುಬ್ಬಿ ತಾಲೂಕಿನ ಎಂ.ಹೆಚ್‌ ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಹಿನ್ನೆಲೆ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿಗೆ ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ ಸೇರಿ ನಾನಾ ಪೂಜಾ ಕೈಂಕರ್ಯಗಳನ್ನು ಮುಂಜಾನೆಯಿಂದಲೇ ನಡೆಸಲಾಯಿತು. ಇನ್ನು ರಥೋತ್ಸವ ಹಿನ್ನೆಲೆ ದೇಗುಲ ಹಾಗೂ ರಥಕ್ಕೆ ಹಲವು ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.

ರಥೋತ್ಸವಕ್ಕೂ ಮುನ್ನ ವಾಡಿಕೆಯಂತೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕೂರಿಸಿ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ಮಾಡುತ್ತ ರಥಕ್ಕೇ ಕೂರಿಸಲಾಯಿತು, ಮಧ್ಯಾಹ್ನ 12.30 ರ ಸುಮಾರಿಗೆ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಎಳೆಯಲಾಯ್ತು. ರಥ ಎಳೆಯುತ್ತಿದ್ದಂತೆ ಭಕ್ತರು ಬಾಳೆಹಣ್ಣು, ದವನ ಎಸೆದು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡರು. ಇನ್ನು ಭಕ್ತರು ಸುಡು ಬಿಸಿಲನ್ನು ಲೆಕ್ಕಿಸದೇ ರಥವನ್ನು ಎಳೆದು ಹರಕೆ ತೀರಿಸಿದರು.

ರಥೋತ್ಸವಕ್ಕೆ ಬಂದಿದ್ದ ಸಾವಿರಾರು ಲಕ್ಷಾಂತರ ಭಕ್ತರಿಗೆ ದಾಸೋಹ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು. ಬಿಸಿಲಿನ ಝಳಕಕ್ಕೆ ಬಸವಳಿದಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.

Author:

...
News Desk

eMediaS Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

share
No Reviews