ಜಿಗಣಿ :
ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ, ಹೌದು ಚಿರತೆಯೊಂದು ಮನೆಯೊಳಗೆ ನುಗ್ಗಿರುವ ಘಟನೆ ಬೆಂಗಳೂರಿನ ಆನೇಕಲ್ ನ ಜಿಗಣಿಯ ಕುಂಟ್ಲುರೆಡ್ಡಿ ಲೇಔಟ್ ನಲ್ಲಿ ನಡೆದಿದೆ. ವೆಂಕಟೇಶ್ ಎಂಬುವರ ಮನೆಗೆ ಹಾಡಹಾಗಲೇ ಚಿರತೆ ನುಗ್ಗಿದೆ. ಇನ್ನು ಚಿರತೆ ಮನೆಯೊಳಗೆ ಬರ್ತಿದ್ದಂತೆ ಮನೆಯವರು ಗಮನಿಸಿ ಕೂಡಲೇ ಡೋರ್ ಲಾಕ್ ಮಾಡಿ ಹೊರಬಂದಿದ್ದಾರೆ.
ಇನ್ನು ಮಾಹಿತಿ ತಿಳಿದ ಕೂಡಲೇ ಪುರಸಭೆ ಅಧಿಕಾರಿಗಳು ಮತ್ತು ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಜಿಗಣಿ ಪೊಲೀಸರು ಧಾವಿಸಿದ್ದು, ಚಿರತೆ ಸೆರೆಗೆ ಮುಂದಾಗಿದ್ದಾರೆ, ಚಿರತೆಯನ್ನು ಸುರಕ್ಷಿತವಾಗಿ ಸಂರಕ್ಷಿಸಲು ಮನೆಯ ಮುಂದಿನ ಗೇಟಿನ ಎದುರಾಗಿ ಬೋನನ್ನು ಇಟ್ಟು ಕಾರ್ಯಚರಣೆ ನಡೆಸಿದ್ದರು, ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ, ಇನ್ನು ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.