ತುಮಕೂರು:
ತುಮಕೂರು ನಗರದ ಸದಾಶಿವ ನಗರದಲ್ಲಿರುವ ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಬೆನ್ನಲ್ಲೇ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಗೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್.ಪಿ. ಲಕ್ಷ್ಮೀ ನಾರಾಯಣ್ ನೇತೃತ್ವದಲ್ಲಿ ಡಿವೈಎಸ್ಪಿ ಎಚ್.ಜಿ. ರಾಮಕೃಷ್ಣ, ಇನ್ಸ್‌ಪೆಕ್ಟರ್ ಶಿವರುದ್ರಪ್ಪ ಅವರ ತಂಡ ದಾಳಿ ಮಾಡಿದ್ದು ಹಲವು ಗಂಟೆಗಳ ಕಾಲ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಅಂಬೇಡ್ಕರ್ ಅಭಿವೃದ್ದಿ ನಿಗಮದ ಕಚೇರಿಯಲ್ಲಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸಾಲ ವಿತರಣೆ ಯೋಜನೆಗಳಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಸಾರ್ವಜನಿಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಬೆನ್ನಲ್ಲೇ ರೇಡ್ ಮಾಡಲಾಗಿದ್ದು ಅಧಿಕಾರಿಗಳಿಗೆ ಫುಲ್ ಚಳಿ ಬಿಡಿಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳ ಆರ್ಥಿಕ ಲೆಕ್ಕಪತ್ರ, ಲಭ್ಯವಿರುವ ದಾಖಲೆಗಳು ಹಾಗೂ ಬ್ಯಾಂಕ್ ಖಾತೆಗಳನ್ನು ತಪಾಸಣೆ ನಡೆಸ, ನಿಗಮದಲ್ಲಿ ನಡೆದಿರೋ ಅವ್ಯವಹಾರದ ಬಗ್ಗೆ ಕೆಲವು ಅಧಿಕಾರಿಗಳ ಪಾತ್ರದ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಅಧಿಕಾರಿಗಳನ್ನು ವಿಚಾರಣೆಗೊಳಪಡಿಸುವ ಸಾದ್ಯತೆ ಇದೆ. ದಾಳಿಯ ಹಿನ್ನೆಲೆಯಲ್ಲಿ ನಿಗಮದ ಉದ್ಯೋಗಿಗಳು ಮತ್ತು ಲಾಭಾಂಶದ ಪಡೆದಿರುವ ಫಲಾನುಭವಿಗಳಲ್ಲಿ ಆತಂಕ ಮೂಡಿದ್ದು, ಮುಂದಿನ ದಿನಗಳಲ್ಲಿ ತನಿಖೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.