ಮಧುಗಿರಿ :
ಸಚಿವ ರಾಜಣ್ಣ ನೇತೃತ್ವದಲ್ಲಿ 3 ವರ್ಷದ ಹಿಂದೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಸುಮಾರು 14 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಭಾಗಿಯಾಗಿ ಗಮನ ಸೆಳೆದಿದ್ದರು. ಈಗ ಅದೇ ರೀತಿ ಸಚಿವ ಕೆ,ಎನ್ ರಾಜಣ್ಣ ಅವರ ಅಭಿನಂದನಾ ಕಾರ್ಯಕ್ರಮವನ್ನು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ತಿಳಿಸಿದ್ದಾರೆ. ರಾಜಣ್ಣ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ 45ನೇ ವಿವಾಹ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ಮೇ 13 ರಂದು ತುಮಕೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಅಂಗವಾಗಿ ರಾಜೇಂದ್ರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಪೂರ್ವಭಾಗಿ ಸಭೆಯಲ್ಲಿ ಮಾತನಾಡಿದ ರಾಜೇಂದ್ರ ರಾಜಣ್ಣ, ಸಚಿವ ರಾಜಣ್ಣ ನಡೆದ ಬಂದ ರಾಜಕೀಯ ಚರಿತ್ರೆ, ಸಹಕಾರಿ ಕ್ಷೇತ್ರದ ಬೆಳವಣಿಗೆ ಹಾಗೂ ರೈತ ಪರ ಯೋಜನೆಗಳನ್ನು ಜಾರಿಗೆ ತಂದಿರುವ ಬಗ್ಗೆ ಗ್ರಂಥ ರಚನೆ ಮಾಡಲಾಗಿದ್ದು, ಅಭಿನಂದನಾ ಗ್ರಂಥವನ್ನು ಅಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಇದು ಪಕ್ಷದ ಕಾರ್ಯಕ್ರಮವಲ್ಲ ಕೆ.ಎನ್ ರಾಜಣ್ಣನವರ ಕಾರ್ಯಕ್ರಮ ಆಗಿರುವುದರಿಂದ ಪಕ್ಷತೀತಾವಾಗಿ ಎಲ್ಲಾ ಪಕ್ಷದ ಸ್ನೇಹಿತರನ್ನು ಆಹ್ವಾನಿಸಲಾಗಿದ್ದು, ಈ ವರ್ಷ ದಾಖಲೆ ನಿರ್ಮಿಸುವ ಒಂದು ಮೈಲಿಗಲ್ಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕೇಂದ್ರ ಸಚಿವ ವಿ ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ ಎಂದು ರಾಜೇಂದ್ರ ರಾಜಣ್ಣ ಹೇಳಿದ್ದಾರೆ.
ಇನ್ನು ರಾಜಣ್ಣ ಅಭಿನಂದನಾ ಸಮಾರಂಭದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾಜಿ ಜಿ.ಪಂ ಅಧ್ಯಕ್ಷ ಶಾಂತಲಾ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಯಣ ರೆಡ್ಡಿ , ಪುರಸಭೆ ಅಧ್ಯಕ್ಷ ಲಾಲಾ ಪೇಟೆ ಮಂಜುನಾಥ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ ರಾಜಣ್ಣ ಸೇರಿ ಹಲವರು ಉಪಸ್ಥಿತರಿದ್ದರು.