ಮಧುಗಿರಿ : ಮೂಲ ಸೌಲಭ್ಯ ಕಲ್ಪಿಸುವಂತೆ ಭಟ್ಟಗೆರೆ ಗ್ರಾಮಸ್ಥರ ಪ್ರತಿಭಟನೆ

ಗ್ರಾಮಸ್ಥರು ಮೂಲ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನೆ ನಡೆಸುತ್ತಿರುವುದು.
ಗ್ರಾಮಸ್ಥರು ಮೂಲ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನೆ ನಡೆಸುತ್ತಿರುವುದು.
ತುಮಕೂರು

ಮಧುಗಿರಿ:

ಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಭಟ್ಟಗೆರೆ ಗ್ರಾಮಸ್ಥರು ಧರಣಿಯನ್ನು ಹಮ್ಮಿಕೊಂಡಿದ್ದರು.

ಗೃಹ ಸಚಿವರ ಕ್ಷೇತ್ರದಲ್ಲಿ ದಲಿತರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು, ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ತೆಯಿಲ್ಲದೇ , ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲದೇ ಹಾಗೂ ವಿದ್ಯುತ್‌ ಸಂಪರ್ಕವಿಲ್ಲದೇ ಗ್ರಾಮಸ್ಥರು, ಶಾಲೆಗೆ ಹೋಗುವ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಮೂಲ ಸೌಲಭ್ಯವಿಲ್ಲದೇ, ಈ ಬಗ್ಗೆ ಗ್ರಾಮಸ್ಥರು ಸುಮಾರು ಬಾರಿ ಅರ್ಜಿ ನೀಡಿದರೂ ಅಧಿಕಾರಿಗಳು ಇದರ ಬಗ್ಗೆ ಮಾತ್ರ ಗಮನಹರಿಸುತ್ತಿರಲಿಲ್ಲ, ಇದರಿಂದ ಬೇಸತ್ತ ಗಾಮಸ್ಥರು ಇಂದು ಗ್ರಾಮ ಪಂಚಾಯಿತಿ ಆವರಣದಲ್ಲಿ ಬಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಇನ್ನು 10.30 ಆದರೂ ಸಹ ಗ್ರಾಮ ಪಂಚಾಯಿತಿ ಪಿಡಿಒ ಆಗಲಿ , ಯಾವೊಬ್ಬ ಅಧಿಕಾರಿಗಳಾಗಲಿ ಗ್ರಾಮ ಪಂಚಾಯಿತಿಗೆ ಆಗಮಿಸದೇ ಕೇವಲ ದೂರವಾಣಿ ಕರೆಯಲ್ಲೇ ಉತ್ತರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Author:

...
Editor

ManyaSoft Admin

Ads in Post
share
No Reviews