ಮಧುಗಿರಿ:
ಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಾಲೂಕಿನಲ್ಲಿ ನಡೆದ ಉಪ ಚುನಾವಣೆಯಲ್ಲಿ ಕೆ.ಎನ್.ಆರ್ ಹಾಗೂ ಆರ್.ಆರ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು, ಚುನಾವಣೆ ಅಧಿಕಾರಿಯಾಗಿ ತಹಶೀಲ್ದಾರ್ ಶಿರಿನ್ ತಾಜ್ ತಮ್ಮ ಕರ್ತವ್ಯ ನಿರ್ವಹಿಸಿದರು. ಇನ್ನು ಗ್ರಾಮಪಂಚಾಯ್ತಿಯ ಮಾಜಿ ಅಧ್ಯಕ್ಷ ಹಾಗೂ VSSN ಕಾಂಗ್ರೇಸ್ ಅಧ್ಯಕ್ಷರಾದ ಲಕ್ಷ್ಮಿನಾರಾಯಣ ಮಾತನಾಡಿ ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರರವರ ಸಹಕಾರದಿಂದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಇದಕ್ಕೆ ಸಹಮತ ನೀಡಿದ ಎಲ್ಲಾ ಅಭ್ಯರ್ಥಿಗಳಿಗೂ ಧನ್ಯವಾದಗಳು ಎಂದು ತಿಳಿಸಿದರು.
ಇನ್ನು ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಪಾಲಕೃಷ್ಣ, ಸದಸ್ಯರಾದ ಅಂಗಡಿ ತಿಮ್ಮಣ್ಣ, ರಂಗನಾಥಪ್ಪ , ಮುಖಂಡ ಕಿಶೋರ್, ಚಿಕ್ಕತಾಯಮ್ಮ ವನಜಾಕ್ಷಿ ರಂಗಸ್ವಾಮಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.