ಮಧುಗಿರಿ : ಡಿಕೆ ಸಂವಿಧಾನ ವಿರೋಧಿ ಹೇಳಿಕೆ | ಮಧುಗಿರಿಯಲ್ಲಿ ಬೀದಿಗಿಳಿದ ಕಮಲ ಪಡೆ

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತುಮಕೂರು

ಮಧುಗಿರಿ : 

ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯ ಮತ್ತು ಇತ್ತೀಚೆಗೆ ಖಾಸಗಿ ವಾಹಿನಿಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಮಧುಗಿರಿಯಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಚಿಕ್ಕಓಬರೆಡ್ಡಿ, ತಾಲೂಕು ಎಸ್ಟಿ ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ಬಾಬು ನ್ಯಾತಪ್ಪ ಮತ್ತು ಬಿಜೆಪಿ ಮುಖಂಡರಾದ ವೆಂಕಟೇಶ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಿಡಿಗೇಶಿ ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರು ಅಭಿವೃದ್ದಿ ಮಾತ್ರ ಮರೀಚಿಕೆಯಾಗಿದೆ. ಕೇವಲ ಎರಡು ಸಾವಿರಕ್ಕೋಸ್ಕರ ನಿಮ್ಮ ಇಡೀ ಜೀವನ ಹಾಳು ಮಾಡಿಕೋಳ್ಳಬೇಡಿ, ಮುಂದೆಯಾದ್ರೂ ಯೋಚನೆ ಮಾಡಿ ಎಚ್ಚರಿಕೆಯಿಂದ ಮತದಾನ ಮಾಡಿ. ಡಿಕೆ ಶಿವಕುಮಾರ್‌ ಅವರ ಒಂದು ಹೇಳಿಕೆಯಿಂದ ರಾಜ್ಯ ಸರ್ಕಾರದ ಬಗ್ಗೆ ಇಡೀ ದೇಶವೇ ಮಾತನಾಡುವಂತಾಗಿದೆ ಎಂದು ಆರೋಪಿಸಿದರು.

ಇನ್ನು ಬಿಜೆಪಿ ಮಂಡಳ ಅಧ್ಯಕ್ಷ ಹನುಮಂತ ರೆಡ್ಡಿ ಮಾತನಾಡಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅಲ್ಪ ಸಂಖ್ಯಾತರ ಓಲೈಕೆಗಾಗಿ ಸಂವಿಧಾನ ಬದಲಾವಣೆ ಮಾಡಲು ಅವಕಾಶವಿದೆ ಎಂದು ಹೇಳಿದ್ದಾರೆ. ಇದರಿಂದ ಕಾಂಗ್ರೆಸ್‌ ಮುಖವಾಡ ಕಳಚಿ ಬಿದ್ದಿದೆ ಎಂದರು. ಬಿಜೆಪಿ ಪಕ್ಷ ಸಂವಿಧಾನ ವಿರೋಧಿ ಅಂತೇಳಿ ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸಿದ್ರು, ಆದರೆ ಇಂದು ಕಾಂಗ್ರೆಸ್‌ ಪಕ್ಷದ ಪ್ರಭಾವಿ ಸಚಿವರೇ ಸಂವಿಧಾನ ವಿರೋಧಿ ಮಾತುಗಳನ್ನಾಡಿದ್ದಾರೆ. ಇನ್ನು ಎಸ್ಸಿ ಎಸ್ಟಿ ಅನುದಾನದಲ್ಲಿ ದೊಡ್ಡ ಹಗರಣ ನಡೆದಿದೆ. ಇಂತಹ ಸಚಿವರು ತಕ್ಷಣ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಬರುತ್ತಿದ್ದು ಬಿಜೆಪಿ ಪಕ್ಷದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.

ಒಟ್ಟಿನಲ್ಲಿ ಡಿಕೆಶಿ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ರಾಷ್ಟ್ರದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಕಾಂಗ್ರೆಸ್‌ಗೆ ಇಂದು ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.

Author:

...
Editor

ManyaSoft Admin

share
No Reviews