ಮಧುಗಿರಿ: ಜೀತ ವಿಮುಕ್ತರ ಸಮಗ್ರ ಪುನರ್ ವಸತಿಗಾಗಿ ಹೋರಾಟ

ಜೀತವಿಮುಕ್ತರ ಸಮಗ್ರ ಪುನರ್‌ ವಸತಿಗಾಗಿ ಜೀವಿಕ ಸಂಘಟನೆ ಪ್ರತಿಭಟನೆ ನಡೆಸಿದರು.
ಜೀತವಿಮುಕ್ತರ ಸಮಗ್ರ ಪುನರ್‌ ವಸತಿಗಾಗಿ ಜೀವಿಕ ಸಂಘಟನೆ ಪ್ರತಿಭಟನೆ ನಡೆಸಿದರು.
ತುಮಕೂರು

ಮಧುಗಿರಿ:

ಜೀತವಿಮುಕ್ತರ ಸಮಗ್ರ ಪುನರ್‌ವಸತಿಗಾಗಿ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ 500 ಕೋಟಿ ಮೀಸಲಿಡಲಿ ಎಂದು ಆಗ್ರಹಿಸಿ ಜೀವಿಕ ಸಂಘಟನೆ ಪ್ರತಿಭಟನೆ ನಡೆಸಿದರು.  ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಜೀವಿಕ ಸಂಘಟನೆಯ ತಾಲೂಕು ಸಂಚಾಲಕ ಹನುಮಂತರಾಯಪ್ಪ, ಒಕ್ಕೂಟದ ಅದ್ಯಕ್ಷ ತಿಮ್ಮಯ್ಯ, ಮುಖಂಡರಾದ ಕದರಪ್ಪ ಶ್ಯಾಮಣ್ಣ, ನರಸಿಂಹಪ್ಪ, ನರಸಿಂಹ ಮುರ್ತಿ, ಗಂಗಾಧರಪ್ಪ ಸೇರಿ ಹಲವಾರು ಮಂದಿ ಭಾಗಿಯಾಗಿದ್ದರು.

ಜೀವಿಕ ಸಂಘಟನೆ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು. ಬಳಿಕ ತಾಲೂಕು ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಜೀವಿಕ ಸಂಘಟನೆಯ ಜಿಲ್ಲಾ ಸಂಚಾಲಕ ಡಿಟಿ ಸಂಜೀವಮೂರ್ತಿ, ಈ ಬಾರಿಯ ಬಜೆಟ್‌ನಲ್ಲಿ ಬಾರಿಯ ಬಜೆಟ್‌ನಲ್ಲಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. 2017 ರಿಂದ ಇಲ್ಲಿಯವರೆಗು ಅರ್ಜಿ ಸಲ್ಲಿಸಿದ ಜೀತದಾಳುಗಳಿಗೆ ಜೀತದಾಳುಗಳೆಂದು ತೀರ್ಮಾನಿಸಿ ಬಿಡುಗಡೆ ಪತ್ರ ನೀಡಬೇಕು. ಜಿಲ್ಲಾಧಿಕಾರಿಗಳು ತಕ್ಷಣ ಜಾಗೃತಿ ಸಮಿತಿ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಜೀತ ವಿಮುಕ್ತರಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಜೀವಿಕ ಸಂಘಟನೆಗೆ ಪುರಸಭಾ ವತಿಯಿಂದ ನಿವೇಶನ ಮುಂಜೂರು ಮಾಡಬೇಕು. ಸಾಗುವಳಿ ಮಾಡುತ್ತಿರುವ ಜೀತದಾಳುಗಳಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ತಿಳಿಸಿದರು.

Author:

...
Editor

ManyaSoft Admin

Ads in Post
share
No Reviews